ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಳಗಾವಿ (Belagavi) :  ಶಿವಮೊಗ್ಗದಲ್ಲಿ ಸರ್ಕಾರಿ ನೌಕರ ಚಂದ್ರಶೇಖರ್ ಆತ್ಮಹತ್ಯೆಗೆ(Sucide) ಶರಣಾಗಿದ್ದ  ಬೆನ್ನಲ್ಲೆ ಬೆಳಗಾವಿಯಲ್ಲಿ ಮತ್ತೊಬ್ಬ ಸರ್ಕಾರಿ ನೌಕರ ರಾಜ್ಯ ಸರ್ಕಾರದ ಸಚಿವರ ಆಪ್ತ ಸಹಾಯಕನ(personal assistant) ಹೆಸರನ್ನು ಬರೆದಿಟ್ಟು ತಹಶೀಲ್ದಾರರ ಕಚೇರಿಯಲ್ಲಿಯೇ (Tahasildar Office) ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.

ತಹಶೀಲ್ದಾರ್ ವಾಟ್ಸಪ್ ಗ್ರೂಪ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ (Lakshmi Hebbalkar) ಅವರ ಆಪ್ತರೇ ತನ್ನ ಸಾವಿಗೆ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ಮೆಸೇಜ್ ಮಾಡಿದ್ದಾರೆಂದು ಗೊತ್ತಾಗಿದೆ.

ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಆಫೀಸ್‌ನಲ್ಲಿ ಘಟನೆ ನಡೆದಿದ್ದು,  ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಸಿ) ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ.  ತಹಶೀಲ್ದಾರ್ ಬಸವರಾಜ ನಾಗರಾಳ (Basavaraj Nagaral) ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾಗುವ ಮುನ್ನ ರುದ್ರಣ್ಣ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಆಪ್ತ ಸಹಾಯಕನ (ಪಿಎ) ಹೆಸರು ಬರೆದಿಟ್ಟಿದ್ದಾರೆ. ಬೆಳಗಾವಿಯ ತಹಶೀಲ್ದಾ‌ರ್ ಬಸವರಾಜ್ ನಾಗರಾಳ ಚೇಂಬರ್‌ನಲ್ಲಿಯೇ ಕೆಲಸ ಮಾಡುತ್ತಿದ್ದ ಎಫ್‌ಡಿಸಿ(FDC) ರುದ್ರಣ್ಣ ಯಡಣ್ಣವರ ಇದೇ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದರಾಗಿದ್ದರು. ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್, ಖಡೇಬಜಾ‌ರ್ ಪೊಲೀಸರ(Khadebazar Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಗ್ರೂಪ್‌ಲ್ಲಿ ರುದ್ರಣ್ಣ ಸಂದೇಶ ರವಾನಿಸಿದ್ದರು. ಬೆಳಗಾವಿ ತಹಶಿಲ್ದಾ‌ರ್ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪಲ್ಲಿ ಸಂದೇಶ ಕಳುಹಿಸಿದ್ದಾರೆ. ನಾನು ಆತ್ಮಹತ್ಯೆಗೆ ಶರಣಾಗುವುದಾಗಿ ಗ್ರೂಪ್‌ನಲ್ಲಿ ಮೆಸೆಜ್ ಮಾಡಿದ್ದರು. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸಚಿವರ ಆಪ್ತ ಸಹಾಯಕ ಸೋಮು ಅವರೇ ಕಾರಣ ಎಂದು ಬರೆದಿದ್ದಾರೆ.

ನಿನ್ನೆ ರುದ್ರಣ್ಣ ಅವರನ್ನ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ (Savadatti yallamma Developement Authority) ವರ್ಗಾವಣೆ ಮಾಡಲಾಗಿತ್ತು. ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿದ್ದಾರೆ.

ಇದನ್ನು ಓದಿ : ಮೂರು ದಿನದ ಕೋಳಿಯ ಅಚ್ಚರಿ

ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಮಾಲೀಕನಿಗೆ ಬಿತ್ತು ಬರೋಬ್ಬರಿ ದಂಡ

ಕಾಡು ಕುರಿ ಮಾಂಸ ಹಂಚಲು ಹೊರಟಿದ್ದ ಇಬ್ಬರ ಬಂಧನ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಣೆ