ಕಾರವಾರ : ಭಟ್ಕಳದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಖಾಲಿ ಇರುವ ಕ್ಲರ್ಕ ಕಂ ಟೈಪಿಸ್ಟ್ ಹಾಗೂ ದಲಾಯಿತ ಸೇರಿದಂತೆ ಎರಡು ಹುದ್ದೆಗಳಿಗೆ ಗುತ್ತಿಗೆ ಹಾಗೂ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆ (ವೇತನ ರೂ.17,953) ಗೆ ಪಿಯುಸಿ, ಹಾಗೂ ಜ್ಯೂನಿಯರ್ ಟೈಪಿಂಗ್ ಆಗಿರಬೇಕು. ದಲಾಯಿತ ಹುದ್ದೆ (ವೇತನ ರೂ.15,569) ಗೆ ಎಸ್.ಎಸ್.ಎಲ್. ಸಿ. ಗರಿಷ್ಠ ಪಿಯುಸಿ ಅದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜು. 25 ಕೊನೆಯ ದಿನಾಂಕವಾಗಿದೆ.
ಅರ್ಜಿಯನ್ನು ಕಾರ್ಯದರ್ಶಿಗಳು, ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜಿಎಂ. ಸಿ, ನ್ಯಾಯಾಲಯ ಸಂಕೀರ್ಣ, ಭಟ್ಕಳ- 581 320 ಈ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜುಲೈ 27 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರು, ಭಟ್ಕಳ ಇವರ ಕಚೇರಿಯಲ್ಲಿ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ