ಕಾರವಾರ KARWAR : ಕಾರವಾರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ (REGIONAL SCIENCE CENTER)ಖಾಲಿ ಇರುವ ಕ್ಯುರೇಟರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (APPLICATION) ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸಿ.ವಿ ಮತ್ತು ಎಲ್ಲಾ ಅಗತ್ಯ ದಾಖಲೆಗಳ ದೃಢೀಕರಿಸಿದ ಪ್ರತಿಗಳೊಂದಿಗೆ “ಅಧ್ಯಕ್ಷರು, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ”, ಕೈಗಾ ನಿಲಯ, ಕೋಡಿಬಾಗ, ಕಾರವಾರ – 581 303 ಇಲ್ಲಿಗೆ ಜು. 19 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 295540 ಗೆ ಸಂಪರ್ಕಿಸುವಂತೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.