ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಕಾಂಗ್ರೆಸ್ ಶಾಸಕ ಸತೀಶ್ ಸೈಲ್(Congress MLA Satish Sail) ವಿರುದ್ದ ಬೇಲೇಕೇರಿ ಅದಿರು ನಾಪತ್ತೆ(Belekeri Iroore Missing) ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಬಂಧನ ವಾರಂಟ್(Arrest Warrant) ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಶಾಸಕ ಸತೀಶ್ ಸೈಲ್(MLA Satish Sail) ಅವರ ಕೇಸ್ ನಡೆಯುತ್ತಿದ್ದರೂ ಹಲವು ಬಾರಿ ವಿಚಾರಣೆಗೆ ಹಾಜರಾಗಿಲ್ಲ. ಅಲ್ಲದೇ ಇವತ್ತು ಪ್ರಕರಣದ ಎಲ್ಲಾ ಆರೋಪಿಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿದ್ದರೂ ಮೊದಲ ಆರೋಪಿಯಾಗಿರುವ ಸತೀಶ್ ಸೈಲ್ ಗೈರಾಗಿದ್ದಾರೆ. ಅವರ ಪರವಾಗಿ ಹಾಜರಿದ್ದ ವಕೀಲರು ಬೇರೊಂದು ನ್ಯಾಯಾಲಯದಲ್ಲಿ ಕಾರ್ಯನಿಮಿತ್ತ ಕೆಲಸದಲ್ಲಿರುವುದರಿಂದ ವಿಚಾರಣೆ ಮುಂದೂಡುವಂತೆ ಕೋರಿದ್ದರು. ಇದರಿಂದ ಗರಂ ಆದ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶರು ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್(Warrant) ಹೊರಡಿಸಿದ್ದಾರೆ.
ಹೀಗಾಗಿ ಕಾರವಾರ ಶಾಸಕ ಸತೀಶ ಸೈಲ್ ಗೆ(Karwar MLA Satish Sail) ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಹಲವು ವರ್ಷಗಳಿಂದ ಸೈಲ್ ಬೇಲೇಕೆರಿ ಅದಿರು(Belekeri Mines) ನಾಪತ್ತೆ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಅಲ್ಲದೇ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ(ED Raid) ನಡೆಸಿ ಬಂಗಾರ ಮತ್ತು ನಗದನ್ನ ವಶಪಡಿಸಿಕೊಂಡಿದ್ದರು. ನಿನ್ನೆವರೆಗೆ ಅವರು ಜಾಮೀನಿನ ಮೇಲಿದ್ದರು.
ಇದನ್ನು ಓದಿ : ಶಾಸಕ ಸತೀಶ್ ಸೈಲ್ ಜಾಮೀನು ರದ್ದು. ಮತ್ತೆ ಜೈಲು ಸೇರುವ ಸಾಧ್ಯತೆ.
ಸೋನಾರಕೇರಿಯ ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ದುರ್ಮರಣ.
ಹೆದ್ದಾರಿಯಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಬೆಂಕಿ. ಸ್ಥಳದಲ್ಲಿ ಆತಂಕದ ವಾತಾವರಣ.
ಲಿಪ್ಟ್ ಕೆಳಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು. ಮುರ್ಡೇಶ್ವರದ ಕಾಮತ್ ಯಾತ್ರಿ ನಿವಾಸದಲ್ಲಿ ಘಟನೆ.
ಮುರ್ಡೇಶ್ವರ ಮತ್ತು ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ. ಮೂವರ ಮೇಲೆ ಪ್ರಕರಣ.
ಕರ್ತವ್ಯದಲ್ಲಿರುವಾಗ ಬಿಸಿಯೂಟದ ಕೋಣೆಯಲ್ಲಿ ಕುಸಿದು ಬಿದ್ದ ಮಹಿಳೆ ಸಾವು

