ಬೆಂಗಳೂರು: ವಾಲ್ಮೀಕಿ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕು, ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಉತ್ತರಕನ್ನಡ ಜಿಲ್ಲೆಯ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಪಾಲ್ಗೊಂಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ನೇತೃತ್ವದಲ್ಲಿ ಈ ಹೋರಾಟ ನಡೆಸಿದರು. ಬೆಂಗಳೂರು ಕುಮಾರಕೃಪಾ ಗೆಸ್ಟ್ ಹೌಸ್‌ನಿಂದ ಪ್ರತಿಭಟನೆಗೆ ಪಾಲ್ಗೊಂಡು, ಬಳಿಕ ಅಲ್ಲಿಂದ ಕಾಲ್ನಡಿಗೆಯಲ್ಲಿ ತೆರಳಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೋಲೀಸರು ಹಲವರನ್ನು ಬಂಧಿಸಿ ಬಿಡುಗಡೆಗೊಳಿಸಿದರು.
ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದು, ಬಿಜೆಪಿಯು ಸಿಎಂ ರಾಜೀನಾಮೆಗೂ ಆಗ್ರಹಿಸುತ್ತಿದೆ. ಹೀಗಾದಲ್ಲಿ ಮಾತ್ರ ತನಿಖೆ ನಡೆಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿಯ ರಾಜ್ಯ ಘಟಕದ ಸದಸ್ಯರು ಹಾಗೂ ಶಾಸಕರು ಆಗ್ರಹಿಸಿದರು.