ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಶಿವಮೊಗ್ಗ(Shivamogga) : ಗಾಂಜಾ ಮತ್ತಿನಲ್ಲಿ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿ ಕಿಶೋರ್ (28)ನನ್ನು ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆ ಲಾಂಗ್ನಿಂದ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾನಗರ ಪೊಲೀಸ್ ಠಾಣೆ(Tunganagara Police Station) ವ್ಯಾಪ್ತಿಯ ವಾಜಪೇಯಿ ಲೇಔಟ್ನಲ್ಲಿ(Vajapaeyi Layout) ಗುರುವಾರ ಬೆಳಗ್ಗೆ ನಡೆದಿದೆ.
ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಆರೋಪಿ ಲಾಂಗ್ನಿಂದ ದಾಳಿ ನಡೆಸಲು ಮುಂದಾಗಿದ್ದಾನೆ. ಹಲವು ಬಾರಿ ಎಚ್ಚರಿಕೆ(Warning) ನೀಡಿದರೂ ದಾಳಿ ಮುಂದುವರಿಸಿದ್ದರಿಂದ, ದೊಡ್ಡಪೇಟೆ ಸಿಪಿಐ(Doddapete CPI) ಸತ್ಯನಾರಾಯಣ್ ವೈ. ಆತ್ಮರಕ್ಷಣೆಗಾಗಿ ಆರೋಪಿ ಕಿಶೋರ್ನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿ ಕಿಶೋರ್ನನ್ನು ಪೊಲೀಸರು ವಶಕ್ಕೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(Shivamogga Meggan Hospital) ದಾಖಲಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಗಣೇಶ್ ಅವರಿಗೂ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಪರಿಶೀಲನೆ ನಡೆಸಿದರು.
ಗಾಂಜಾ ಮತ್ತಿನಲ್ಲಿ ನಡೆದಿದ್ದ ವೃದ್ಧೆ ಕೊಲೆ ಪ್ರಕರಣದ ತನಿಖೆಯ ವೇಳೆ ಈ ಎನ್ಕೌಂಟರ್ ಮಾದರಿಯ ಕಾರ್ಯಾಚರಣೆ ನಡೆದಿದ್ದು, ಪ್ರಕರಣದ ಕುರಿತು ತುಂಗಾನಗರ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ನಿನ್ನೆ ಮೊಮ್ಮಗನ ಗಾಂಜಾ ಚಟದಿಂದ ಬೇಸತ್ತ ವೃದ್ದೆ ಪೊಲೀಸ್ ಠಾಣೆಗೆ ದೂರು ನೀಡಲು ತೆರಳುತ್ತಿದ್ದಾಗ ಕೊಲೆ ಮಾಡಿದ್ದ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧನಕ್ಕೆ ತೆರಳಿದ್ದರು.
