ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)  ಕುಮಟಾ(kumta) :  2026ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿಗೆಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿ  ಲೋಕೇಶ ಅರಿಷಿಣಗುಪ್ಪಿ ಭಾಜನರಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಲೊಕೇಶ್ ಅವರ  ದಕ್ಷ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್  ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕರ್ನಾಟಕ ಪ್ರೆಸ್ ಕ್ಲಬ್ ಪ್ರತಿವರ್ಷವೂ ಕನ್ನಡ ನಾಡು, ನುಡಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿದೆ. ಲೋಕೇಶ ಅವರು ತಮ್ಮ ವೃತ್ತಿ ಬದುಕಿನ ಜೊತೆಗೆ ಸಾಮಾಜಿಕ ಕಳಕಳಿಯೊಂದಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕ್ಲಬ್‌ನ ರಾಜ್ಯಾಧ್ಯಕ್ಷ ರಮೇಶ ಎಸ್ ಜೆ  ತಮ್ಮ ಆಯ್ಕೆ ಪತ್ರದಲ್ಲಿ ತಿಳಿಸಿದ್ದಾರೆ.

ಇದೇ ಜನವರಿ 13, 2026 ರ ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ನಾಗರಭಾವಿಯಲ್ಲಿರುವ ಕಲಾಗ್ರಾಮದಲ್ಲಿ ನಡೆಯಲಿರುವ ‘ಸಾಧಕರ ಸಮಾಗಮ’ ಕಾರ್ಯಕ್ರಮದಲ್ಲಿ ಲೋಕೇಶ ಅರಿಷಿಣಗುಪ್ಪಿ ಅವರಿಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅವರ ಈ ಸಾಧನೆಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕ ವಲಯದಿಂದ  ಬಾರೀ ಅಭಿನಂದನೆಗಳು ವ್ಯಕ್ತವಾಗಿವೆ.

ಇದನ್ನು ಓದಿ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಹತ್ಯೆ ಪ್ರಕರಣ. ನ್ಯಾಯಾಲಯದಿಂದ ಆರೋಪಿಗೆ ಶಿಕ್ಷೆ.

ದಾಂಡೇಲಿಯ ಹಿರಿಯ ವಕೀಲ ಅಜಿತ್ ನಾಯಕ ಹತ್ಯೆ ಕೇಸ್. ನ್ಯಾಯಾಲಯದಿಂದ ತೀರ್ಪು ಪ್ರಕಟ.

ಮಾಜಿ ಸಿಎಂ ಬಂಗಾರಪ್ಪ ಅನುಯಾಯಿ ಭಟ್ಕಳದ ಎಲ್. ಎಸ್. ನಾಯ್ಕ ಅಸ್ತಂಗತ.