ಇ ಸಮಾಚಾರ ಡಿಜಿಟಲ್‌ ನ್ಯೂಸ್‌ (esamachara digital news) ಕಾರವಾರ(Karwar) : ಸೆಪ್ಟೆಂಬರ್ 28ರಿಂದ 30 ರವರೆಗೆ ಮುಷ್ಕರ ಇರುವುದರಿಂದ ಬ್ಯಾಂಕ್ ಶಾಖೆಗಳು ಮುಚ್ಚಿರುತ್ತವೆ. ಗ್ರಾಹಕರಿಗೆ ಉಂಟಾಗುವ ಅನಾನುಕೂಲತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ, ಆರ್‌ಬಿಐ ನೀಡಿದ ನಿರ್ದೇಶನಗಳ ಅನ್ವಯ,
ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಸೆ.27 ರಂದು ಭಾನುವಾರ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಹಕರು ತಮ್ಮ ಬಾಕಿಯಿರುವ ಬ್ಯಾಂಕಿಂಗ್ ಕೆಲಸಗಳು ಮತ್ತು ತುರ್ತು ವಹಿವಾಟುಗಳನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ, ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಕರೆನ್ಸಿ ಚೆಸ್ಟ್ಗಳು ಅಂದು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

ಮುಷ್ಕರದ ಅವಧಿಯಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್, ಎಟಿಎಂ, ಬಿಎನ್ಎ/ ವಾಟ್ಸಾಪ್ ಬ್ಯಾಂಕಿಂಗ್ , ಮಿಸ್ಡ್ ಕಾಲ್ ಬ್ಯಾಂಕಿಂಗ್, ಚಲನ್ ಪಾವತಿಗಳು ಮತ್ತು ಬಿಸಿನೆಸ್ ಕರೆಸ್ಪಾಂಡೆಂಟ್ ಸೇವೆಗಳಂತಹ ಎಲ್ಲಾ ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸದ್ದು, ಬ್ಯಾಂಕ್ ಶಾಖೆಗಳು ಮುಚ್ಚಿರುವ ಸಮಯದಲ್ಲಿ ತುರ್ತು ಬ್ಯಾಂಕಿಂಗ್ ಅಗತ್ಯಗಳಿಗಾಗಿ ಈ ಡಿಜಿಟಲ್ ಸೌಲಭ್ಯಗಳು ಹಾಗೂ ಬಿಸಿನೆಸ್ ಕರೆಸ್ಪಾಂಡೆಂಟ್ ಸೇವೆಯನ್ನು ಬಳಸಿಕೊಳ್ಳುವಂತೆ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.