ಬೆಂಗಳೂರು : ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಚಿಕನ್ ಮತ್ತು ಫಿಶ್ ಸೇರಿದಂತೆ ಇತರೆ ಕಬಾಬ್ಗಳಲ್ಲಿ ಕೃತಕ ಬಣ್ಣದ ಬೆರೆಸುತ್ತಿರುವುದು ಸಾಬೀತಾಗಿದೆ. ಸಾರ್ವಜನಿಕರು ಮತ್ತು ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ನಿರ್ಬಂಧಿಸಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮುಂದಾಗಿದೆ.
ಕಬಾಬ್ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕಳೆದ ಕೆಲ ತಿಂಗಳಿಂದ ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. ಒಟ್ಟು 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದಾಗ 08 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿದೆ ಎಂದು ಗೊತ್ತಾಗಿದೆ.
ಏಳು ಮಾದರಿಗಳಲ್ಲಿ ಅಪಾಯಕಾರಿಯಾದ ಸನ್ಸೆಟ್ ಯೆಲ್ಲೋ ಹಾಗೂ ಒಂದು ಮಾದರಿಯಲ್ಲಿ ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಅಂಶ ಇದೆ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೇ.
ಹೀಗಾಗಿ The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.
The Food Safety and Standards (Food Products Standards and Food Additives) Regulations, 2011 5 2 16.0 ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದು.
ಈ ಹಿನ್ನೆಲೆಯಲ್ಲಿ ಕಬಾಬ್ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 5 2 3 (1)(zz)(viii) 2 The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ಗಳಡಿ ಅವಕಾಶ ಇಲ್ಲದೇ ಇರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ.
ಒಂದು ವೇಳೆ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಇಲಾಖೆ ತಿಳಿಸಿದೆ.