ಬೆಂಗಳೂರು(BANGLORE) : ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ (TOURISM) ಪೂರಕ ಅವಕಾಶವಿದ್ದು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕವಾದ ಪಾಲಿಸಿ ನಾವು ಮಾಡ್ತೀವಿ. ನೀವು ಮಾಸ್ಟರ್ ಪ್ಲಾನ್ ಸಿದ್ದಪಡಿಸಿಕೊಂಡು ಬನ್ನಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (CM SIDDARAMAIHA) ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಹಲವು ಸೂಚನೆಗಳನ್ನು ನೀಡಿದ್ದಾರೆ.
ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ ನಮ್ಮದು. 320 ಕಿಮೀ ಕರಾವಳಿ(COASTAL) ಪ್ರದೇಶವಿದ್ದರು ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ (UDUPI), ಮಂಗಳೂರು(MANGLORE), ಉತ್ತರಕನ್ನಡ (UTTARKANNADA) ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ(CM) ಸೂಚನೆ ನೀಡಿದರು.
ದೇಶದ ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯವಾಗಿದೆ. ನೆರೆಯ ಕೇರಳ (KERAL) ದಷ್ಟು ಕೂಡಾ ನಮ್ಮಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಆಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲ ನಕಾಶೆ (BLUE MAP) ಸಿದ್ಧಪಡಿಸಬೇಕು ಎಂದರು.