ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಖೈದಿಯೊಬ್ಬ ಜೈಲು ಸಿಬ್ಬಂದಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಡೆದಿದೆ.
ನಿಯಮ ಪಾಲನೆ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಈ ದೌರ್ಜನ್ಯ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ಸಿಬ್ಬಂದಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಸಂಬಂಧಪಟ್ಟಂತೆ ದೂರು ನೀಡಿದ್ದಾರೆ.
ಕಾರಾಗೃಹದಲ್ಲಿ ಎಲ್ಲರೂ ಕಾನೂನು ಪಾಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಹಾಸನದಿಂದ ಗಡಿಪಾರಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರುವ ಕೈದಿ ರಾಹಿಲ್ ಅಲಿಯಾಸ್ ರೋಹನ್ ಎಂಬಾತ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಜೈಲಿನ ಭದ್ರತೆ ವಿಭಾಗದಲ್ಲಿದ್ದ ಕೈದಿ ರೋಹನ್ ಆಸ್ಪತ್ರೆಗೆ ಹೋಗಲು ತಡವಾಗಿ ಅನುಮತಿ ನೀಡಿದರೂ ಎಂಬ ಕಾರಣಕ್ಕೆ ವಿನೋದ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಸದ್ಯ ಜೈಲಿನಲ್ಲಿ ಕೈದಿಗಳ ಸಿಬ್ಬಂದಿಗಳ ಮೇಲೆ ನಡೆಸುತ್ತಿರುವ ಗೂಂಡಾಗಿರಿಗೆ ಜೈಲಿನ ಸಿಬ್ಬಂದಿ ಬೇಸತ್ತಿದ್ದಾರೆ. ಈ ಹಿಂದೆಯೂ ಸಿಬ್ಬಂದಿ ಮೇಲೆ ಅನೇಕ ಬಾರಿ ಹಲ್ಲೆಯಾದರೂ ಯಾವುದೇ ಕ್ರಮವಾಗಿಲ್ಲ.