ಬೆಂಗಳೂರು(Banglore) : ಬೇಲೆಕೇರಿ (Belekeri) ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್(Karwar Mla Satish Sail) ಹಾಗೂ ಇತರೆ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ (Highcourt) ಆದೇಶ ನೀಡಿದೆ.
ನ್ಯಾಯಮುರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ.
ಆರು ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತು ಮಾಡಿದೆ. ಹೀಗಾಗಿ ನಾಳೆ ಗುರುವಾರ ಎಲ್ಲಾ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ (Released) ಸಾಧ್ಯತೆ ಇದೆ.
ತಮಗೆ ವಿಧಿಸಿದ ಶಿಕ್ಷೆ ರದ್ದು ಪಡಿಸುವಂತೆ ಶಾಸಕ ಸತೀಶ್ ಸೈಲ್ , ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿ ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈ. ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಅಂತಿಮವಾಗಿ ಪ್ರಕರಣಕ್ಕೆ ಸಂಬಂಧಿಸಿದ ಇತರ ಎರಡು ಪ್ರಕರಣಗಳಲ್ಲಿ ತೀರ್ಪು ನೀಡಿದೆ. ಹೀಗಾಗಿ ಪ್ರಮಾಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಸದ್ಯ ರಿಲೀಪ್ ಸಿಕ್ಕಿದಂತಾಗಿದೆ.
ಇದನ್ನು ಓದಿ: ಭಟ್ಕಳದಲ್ಲಿ ಸಿಡಿದೆದ್ದ ಕೂಲಿ ಕಾರ್ಮಿಕರು.