ಬೆಂಗಳೂರು (BANGLORE) : ಬೇಲೇಕೇರಿ(Belekeri) ಅಕ್ರಮ ಅದಿರು ಪ್ರಕರಣಕ್ಕೆ ಸಂಬಂಧಿಸಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ(Karwar MLA Satish Sail) ಶಿಕ್ಷೆಯ ಪ್ರಮಾಣ ನಾಳೆ ಶನಿವಾರ ಪ್ರಕಟವಾಗುವ ಸಾಧ್ಯತೆ ಇದೆ.
ಶುಕ್ರವಾರ ಒಟ್ಟು ಆರು ಪ್ರಕರಣಗಳಲ್ಲಿ ದೋಷಿಯಾಗಿದ್ದ ಶಾಸಕ ಸತೀಶ್ ಸೈಲ್ ಮತ್ತು ಇನ್ನಿತರರ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಶಿಕ್ಷೆ ಪ್ರಮಾಣದ ಅರ್ಜಿಯನ್ನು ವಿಚಾರಣೆ ನಡೆಸಿದರು.
ಶುಕ್ರವಾರ ಸಿಬಿಐ(CBI) ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್. ಹೇಮಾ ಅವರು, 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ಗರಿಷ್ಠ ದಂಡ ವಿಧಿಸುವಂತೆ ಮನವಿ ಮಾಡಿದರು.
ಶಾಸಕ ಸತೀಶ್ ಸೈಲ್ ಪರ ವಕೀಲ ಮೂರ್ತಿ ಡಿ ನಾಯ್ಕ ಅವರು, ಶಾಸಕ ಸತೀಶ್ ಸೈಲ್ ಗೆ ಅನಾರೋಗ್ಯ ಇದೆ. ಸದ್ಯ ಸತೀಶ್ ಸೈಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯ ಕಾರಣದಿಂದ ಈ ಹಿಂದೆ ಬೇಲ್(Bail) ಕೂಡ ಪಡೆದಿದ್ದರು. ಹೀಗಾಗಿ ಕನಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೇ ಸತೀಶ್ ಸೈಲ್ ಆರೋಗ್ಯಕ್ಕೆ ಸಂಬಂಧಿಸಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಪ್ರಕರಣದಲ್ಲಿ ವೈಯಕ್ತಿಕವಾಗಿ ಸತೀಶ್ ಸೈಲ್ ಪಾತ್ರ ಏನು ಇಲ್ಲ. ಅದು ಕಂಪನಿಯ ಮೂಲಕ ಟ್ರಾನ್ಸ್ಪೋರ್ಟ್ ಆಗಿದೆ. ಕಳ್ಳತನದಲ್ಲಿ ಆರೋಪಿಗಳದ್ದು ಎಷ್ಟು ಪಾತ್ರ ಇದೆ ಎಂಬುದನ್ನು ಸಿಬಿಐ ಸ್ಪಷ್ಟಪಡಿಸಿಲ್ಲ ಎಂದು ವಾದ ಮಂಡಿಸಿದರು.
ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರು, ಶಾಸಕ ಸೈಲ್ ಅವರಿಗೆ ನೀವೇನಾದ್ರು ಹೇಳೋದಿದ್ಯಾ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಾಸಕ ಸೈಲ್ ಕಣ್ಣಿರು ಸುರಿಸಿದ್ದಾರೆ. ನನಗೆ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಒಬ್ಬಳು ಬೆಂಗಳೂರು, ಇನ್ನೊಬ್ಬಳು ವಿಜಯನಗರದಲ್ಲಿ ಇದ್ದಾಳೆ. ಪತ್ನಿಗೆ ಒತ್ತಡದ ಖಾಯಿಲೆಯಿಂದ ಬಳಲುತ್ತಿದ್ದಾಳೆ. ನಾನು ಕೂಡ ಕ್ರೋನಿಕಲ್ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಹಾಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಎಂದು ಮನವಿ ಮಾಡಿದರು.
ಸತೀಶ್ ಸೈಲ್ ಅವರನ್ನು ಕಸ್ಟಡಿಗೆ ಪಡೆಯದಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಒಮ್ಮೆ ತೀರ್ಪು ನೀಡಿದ ಮೇಲೆ ಇದಕ್ಕೆ ಅವಕಾಶ ಇಲ್ಲ ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದ್ದರು. ನಾಳೆ ಶನಿವಾರ ಶಿಕ್ಷೆಯನ್ನು ಪ್ರಕಟಿಸುವುದಾಗಿ ತಿಳಿಸಿದರು.
ಜಡ್ಜ್ ಮುಂದೆ ಎಲ್ಲಾ ಅಪರಾಧಿಗಳು ಕೂಡ ಕುಟುಂಬದ ಸಮಸ್ಯೆಗಳು ಹಾಗೂ ಅನಾರೋಗ್ಯದ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಕುಟುಂಬದ ನಿರ್ವಹಣೆ ನಮ್ಮಿಂದಲೇ ಆಗ್ತಾ ಇರೋದು. ಅನಾರೋಗ್ಯಕ್ಕೆ ಚಿಕಿತ್ಸೆಯ ಅವಶ್ಯಕತೆ ಇದೆ ಹೀಗಾಗಿ ಕಡಿಮೆ ಶಿಕ್ಷೆ ಪ್ರಮಾಣ ನೀಡುವಂತೆ ನ್ಯಾಯಾಧೀಶರಿಗೆ ಒಬ್ಬೊಬ್ಬರಾಗಿಯೇ ನ್ಯಾಯಾಧೀಶರಿಗೆ ಮನವಿ ಮಾಡಿಕೊಂಡರು.
ಈ ಬೆನ್ನಲ್ಲೇ ನ್ಯಾಯಾಲಯದಲ್ಲಿ ಹಾಜರಿದ್ದ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಚೇತನ್ ಷಾ, ಸೋಮಶೇಖರ್, ಜನಾರ್ದನ ರೆಡ್ಡಿಯ ಆಪ್ತ ಸ್ವಸ್ತಿಕ್ ನಾಗರಾಜ್, ಖಾರದಪುಡಿ ಮಹೇಶ್, ಕೆವಿ ಗೋವಿಂದರಾಜುನನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದ್ದಾರೆ.
2009-10ರ ನಡುವೆ ನಡೆದಿದ್ದ ಬೆಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದ ಆರು ಪ್ರಕರಣಗಳ ತನಿಖೆ ನಡೆಸಿದ್ದ ಸಿಬಿಐ 2013ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಎಂಟು ತಿಂಗಳ ಅವಧಿಯಲ್ಲಿ ಸೈಲ್ ಮಾಲೀಕತ್ವದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲಿಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರೋದನ್ನು ಪತ್ತೆ ಮಾಡಿತ್ತು. 2012ರಲ್ಲಿ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ, 2013ರ ಸೆಪ್ಟೆಂಬರ್ ನಲ್ಲಿ ಬಂಧಿಸಿತ್ತು. ಆಗ ಸತೀಶ್ ಸೈಲ್ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲು ವಾಸ ಅನುಭವಿಸಿದ್ದರು.
ಇದನ್ನು ಓದಿ : ಮರಕಂಬಿ ದಲಿತರ ದೌರ್ಜನ್ಯ
ವಾಹನ ತಡೆದ ಪೊಲೀಸ್ ಸಿಬ್ಬಂದಿಯನ್ನ ಹೊತ್ತೋಯ್ದ ಚಾಲಕ
ಬೆಲೆಕೇರಿ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ದೋಷಿ