ಭಟ್ಕಳ : ಕಾಲು‌ ಜಾರಿ ಬಿದ್ದು ಕೃಷಿಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಹಾಡುವಳ್ಳಿ (HADUVALLI) ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮಂಜುನಾಥ ಕುಪ್ಪಯ್ಯ ನಾಯ್ಕ(60) ಮೃತ ದುರ್ದೈವಿಯಾಗಿದ್ದು, ಹಾಡುವಳ್ಳಿ ನಿವಾಸಿಯಾಗಿದ್ದಾನೆ. ಭಾನುವಾರ ಬೆಳಗ್ಗೆ ತೋಟಕ್ಕೆಂದು ಮನೆಯಿಂದ ಹೋಗಿದ್ದರು. ಕೃಷಿ ಚಟುವಟಿಕೆ ಮುಗಿಸಿ ಮನೆಗೆ ವಾಪಸ್ ಬರುತ್ತಿರುವಾಗ ಕಾಲು‌ ಜಾರಿ ಬಿದ್ದಿದ್ದಾರೆ. ಸ್ಥಳದಲ್ಲಿಯೇ ಪ್ರಜ್ಞೆ ಕಳೆದುಕೊಂಡ ಅವರನ್ನು  ಭಟ್ಕಳದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಬರುವ ಮುನ್ನವೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.  ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.