ಭಟ್ಕಳ: ಗೊರಟಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಪನ ಕಟ್ಟೆ ವಲಯದ ಆಶ್ರಯದಲ್ಲಿ ಜರುಗಿತು.
ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಘವೇಂದ್ರ ಎಮ್ ನಾಯ್ಕ ಉದ್ಘಾಟನೆ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಭಗವಾನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯ ಭಾಸ್ಕರ್ ನಾಯ್ಕ ರವರು ವಿದ್ಯಾರ್ಥಿಗಳಿಗೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ದಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಮಾನವೀಯ ಮೌಲ್ಯ ಗಳನ್ನು ಅಳವಡಿಸಿಕೊಂಡು ತಂದೆ ತಾಯಿಗೆ ಹೆಮ್ಮೆಯ ಗುರುಗಳಿಗೆ ಮೆಚ್ಚುವಂತಹ ವಿದ್ಯಾರ್ಥಿಗಳಾಗಿ ಸಮಾಜಕ್ಕೆ ಆದರ್ಶವಾದ ಜೀವನ ಆಯ್ಕೆ ಮಾಡಿಕೊಳ್ಳಿ ಎಂದು ಕವಿತೆ ಗಳ ಮೂಲಕ ಮಾಹಿತಿ ನೀಡಿದರು.
ವಲಯ ಮೇಲ್ವಿಚಾರಕರ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ದುರ್ಗಾದಾಸ್ ಸ್ವಾಗತಿಸಿದರು. ಸೇವಾಪ್ರತಿನಿಧಿ ಸಣ್ಣು ಎಸ್ ಗೊಂಡ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.