ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ತಾಲೂಕಿನ ಹನೀಫಾಬಾದ್(Hanifabad) ಬಳಿ ಯುವಕರ ನಡುವೆ ಮಾರಾಮಾರಿ(Clash) ನಡೆದಿದೆ. ಘಟನೆ ಸಂಬಂಧ ಹಲವರ ಮೇಲೆ ಪ್ರಕರಣ ದಾಖಲಾಗಿದೆ.

ವಾಹನ ಫಾರ್ಕಿಂಗ್(Vehicle Parking) ವಿಚಾರದಲ್ಲಿ ಹನಿಫಾಬಾದ್ ನ ಕಸ್ನುಮ್ ಮದುವೆ ಹಾಲ್ ಎದುರು ಸಾರ್ವಜನಿಕ ರಸ್ತೆಯಲ್ಲಿ ಯುವಕರ ಗುಂಪು ಬಡಿದಾಡಿಕೊಂಡಿದೆ. ಹೊಡೆದಾಟ ನಡೆಯುತ್ತಿರುವ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆಯ(Rural Station) ಪೊಲೀಸ್ ನಿರೀಕ್ಷಕ ಮಂಜುನಾಥ ಲಿಂಗಾರೆಡ್ಡಿ ಸಿಬ್ಬಂದಿಗಳೊಂದಿಗೆ ಧಾವಿಸಿದ್ದರು. ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿದ್ದಾರೆ. ಆದರೆ ಯುವಕರು ಪೊಲೀಸರ ಮಾತು ಧಿಕ್ಕರಿಸಿ ಹೊಡೆದಾಟ ಮುಂದುವರಿಸಿದ್ದರು. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಯುವಕರು ನಡು ರಸ್ತೆಯಲ್ಲಿ ಗಲಾಟೆ ಮಸಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ(Social Media) ವೈರಲ್ ಆಗಿದೆ. ಈ ಸಂಬಂಧ ಎಂಟು ಮಂದಿಯ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ(Bhatkal Rural Station) ಪ್ರಕರಣ ದಾಖಲಾಗಿದೆ.

ಹನೀಫಾಬಾದ್‌ನ ಉಜೇಪ ಸೈದ ಅಬ್ದುಲ್ ಖಾದರ, ಸೈಯ್ಯದ ಉಮೇರ ಸೈಯ್ಯದ ಅಬ್ದುಲ್ ಖಾದಿರ, ಉಮೇರ ರುಕ್ಕುದ್ದೀನ್ ಉಬೇದುಲ್ಲಾ, ಮುಗೇರ್ ಎಮ್ ಜೆ, ಮಂಜೂರ ಎಂ ಎನ್., ಆಜಾದನಗರ 6ನೇ ಕ್ರಾಸ್‌ನ ಇಬಾದುಲ್ಲಾ ಸಾದೀಕಟಾನ, ದೇವಿನಗರ ಜಾಲಿಯ ಅಬ್ದುಲ್ ರಹೀಮ ಮಹಮ್ಮದ್ ಹುಸೇನ್, ಮೂಸಾನಗರದ ಮುಸ್ತಾಕ್ ಮಕ್ಖುಲ್ ಹಾಗೂ ದೇವಿನಗರದ ತಾಹೀರ ಮಹಮ್ಮದ್ ಹುಸೇನ್ ವಿರುದ್ಧ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿ : ಪಿಗ್ಮಿ‌ಸಂಗ್ರಹಕಾರರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಮನವಿ.

ಸಿಡಿಲಿನ ಆರ್ಭಟಕ್ಕೆ  ಕುಮಟಾ ಆಡಳಿತ ಸೌಧಕ್ಕೆ  ಹಾನಿ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕಳ್ಳ ಮಂಡ್ಯದಲ್ಲಿ ಆರೆಸ್ಟ್.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದಿದ್ದರೆ ರಾಜಕೀಯ ನಿವೃತ್ತಿ: ಶಾಸಕ ಸತೀಶ್ ಸೈಲ್