ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಭಟ್ಕಳ(Bhatkal) : ಶಹರ ಪೊಲೀಸ್ ಠಾಣಾ(Town Police Station) ವ್ಯಾಪ್ತಿಯ ಮುರಿನಕಟ್ಟಾ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಒಟ್ಟು 5 ಕ್ರಿಮಿನಲ್ ಪ್ರಕರಣಗಳನ್ನು(Criminal Case) ದಾಖಲಿಸಿ 40 ಜನರನ್ನು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ(National Highway 66) ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಅಮ್ಮನವರ ಹೊರೆ ಇಡುವ ಮೂಲ ಮುರಿನಕಟ್ಟೆಯನ್ನು(Murinakatte) ಸ್ಥಳಾಂತರಿಸುವ ಉದ್ದೇಶದಿಂದ ಹೆದ್ದಾರಿ ಪಕ್ಕದ ಸರ್ಕಾರಿ ಜಾಗದಲ್ಲಿ(Government Property) ಹೊಸ ಕಟ್ಟೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಇದೇ ವೇಳೆ ಮೇ 24ರ ರಾತ್ರಿ ಕೆಲ ಕಿಡಿಗೇಡಿಗಳು ಅಕ್ರಮವಾಗಿ ಗುಂಪುಗೂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿ, ನಿರ್ಮಾಣ ಹಂತದಲ್ಲಿದ್ದ ಕಟ್ಟೆಯನ್ನು ಕೆಡವಿದ್ದರು.

ಪರಿಸ್ಥಿತಿ ನಿಯಂತ್ರಿಸಲು ತೆರಳಿದ್ದ ಪೊಲೀಸ್ ಅಧಿಕಾರಿಗಳು(Police Officers) ಮತ್ತು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದಲ್ಲದೆ, ಕಟ್ಟೆಯನ್ನು ಹಾನಿಗೊಳಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಘಟನೆ ಚಿತ್ರೀಕರಿಸುತ್ತಿದ್ದ ಸಾರ್ವಜನಿಕರೊಬ್ಬರ ಮೊಬೈಲ್ ಫೋನ್(Mobile Phone) ಕಸಿದುಕೊಂಡು ಹಲ್ಲೆ ನಡೆಸಿರುವುದೂ ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ(Social Media) ಪ್ರಚೋದನಾಕಾರಿ ವಿಡಿಯೋ ಪ್ರಸಾರ ಮಾಡಿದ ಆರೋಪದಡಿ ಮೊತೀಬ್ ಮಹಮ್ಮದ್ ತಂದೆ ಮಹಮ್ಮದ್ ಅಶ್ರಫ್, ನಿವಾಸಿ ಆಜಾದನಗರ, ಭಟ್ಕಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭಟ್ಕಳ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 4 ಪೊಲೀಸ್ ಅಧೀಕ್ಷಕರು, 10 ಡಿವೈಎಸ್ಪಿಗಳು, 20 ಪೊಲೀಸ್ ನಿರೀಕ್ಷಕರು, 37 ಉಪನಿರೀಕ್ಷಕರು, 31 ಸಹಾಯಕ ಉಪನಿರೀಕ್ಷಕರು ಹಾಗೂ 294 ಹೆಡ್ ಕಾನ್ಸ್‌ಟೇಬಲ್/ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು 850ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಡಿಎಆರ್(DAR), ಕೆಎಸ್‌ಆರ್‌ಪಿ(KSRP) ಹಾಗೂ ಸ್ಪೆಷಲ್ ಆ್ಯಕ್ಷನ್ ಫೋರ್ಸ್(Special Action Force) ತುಕಡಿಗಳನ್ನೂ ಭದ್ರತೆಗೆ ನಿಯೋಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ(Fake News) ಹಾಗೂ ಪ್ರಚೋದನಾಕಾರಿ ಸಂದೇಶಗಳನ್ನು ಹರಡದಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದು, ವದಂತಿಗಳಿಗೆ ಕಿವಿಗೊಡಬಾರದೆಂದು ಸೂಚಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ(Police Department) ಎಚ್ಚರಿಕೆ ನೀಡಿದೆ.

ಇದನ್ನು ಓದಿ : ಕಾರವಾರದಲ್ಲಿ ಭೀಕರ ಅಪಘಾತ : ಆಟೋ ಚಾಲಕ ಸಾವು