ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಭಟ್ಕಳ(Bhatkal) : ವಿವಿಧಅಪರಾಧ ಪ್ರಕರಣಗಳಲ್ಲಿ(Crime Cases) ಭಾಗಿಯಾಗಿರುವ  ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ(46) ನನ್ನು ಉತ್ತರಕನ್ನಡ(Uttarakannada) ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು(Exile) ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶಿಸಿದ್ದಾರೆ.

ಅದರಂತೆ ಇಸ್ಮಾಯಿಲ್ ನನ್ನು  ರಾಯಚೂರು ಜಿಲ್ಲೆಯ(Rayachuru District) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ. ಹವ್ವಾ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ(Bhatkal Town Police Station) ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ 2020ರಿಂದ 2025ರ ಅವಧಿಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಉಳಿದ ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ.

ಆರೋಪಿಯು ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ(Police Department) ಅಭಿಪ್ರಾಯಪಟ್ಟಿದ್ದರಿಂದ . ಭಟ್ಕಳ ನಗರ ಠಾಣೆ ಪೊಲೀಸ್ ನಿರೀಕ್ಷಕರು ಗಡಿಪಾರು ಕ್ರಮಕ್ಕೆ(Exile Action) ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ಅಧಿಕಾರಿಗಳು ಅಭಿಯೋಜನೆ ಮತ್ತು ಪ್ರತಿವಾದಿ ಪರ ವಾದಗಳನ್ನು ಆಲಿಸಿ ಪರಿಶೀಲನೆ ನಡೆಸಿದ ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಗಡಿಪಾರು ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಭಟ್ಕಳ ನಗರ ಠಾಣೆಯ(Bhatkal Town police Station) ಪೊಲೀಸರು ಆರೋಪಿಯನ್ನು ರಾಯಚೂರು ಗ್ರಾಮೀಣ ಠಾಣೆ ಅಧಿಕಾರಿಗಳ ಮುಂದೆ ಹಾಜರುಪಡಿಸಿ ಆದೇಶವನ್ನು ಜಾರಿಗೊಳಿಸಿದ್ದಾರೆ.

ಇದನ್ನು ಓದಿ : ತಲೆಮರೆಸಿಕೊಂಡಿದ್ದ ಕೊಲೆ, ಕಳ್ಳತನ ಆರೋಪಿ ಬಂಧಿಸಿದ ಪಡೆದ ಪೊಲೀಸರು.