ಕಾರವಾರ(KARWAR) : ಭಟ್ಕಳ ತಾಲೂಕು(BHATKAL TALUK) ಆಡಳಿತ ಸೌಧ ಮತ್ತು ಸಹಾಯಕ ಆಯುಕ್ತ ಕಚೇರಿಯಲ್ಲಿ ಹಲವು ವರ್ಷಗಳಿಂದ ಬೇರು ಹೊಡೆದು ಕೂತಿರುವ ನೌಕರರನ್ನು ವರ್ಗಾಯಿಸಿ ಸಾರ್ವಜನಿಕರ ಕೆಲಸ(PUBLIC WORK) ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿದೆ.
ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಗುರುವಾರ ಜಿಲ್ಲಾಧಿಕಾರಿಗೆ ಮನವಿ ನೀಡಿ ಆಗ್ರಹಿಸಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ ಒಂದೇ ಕಚೇರಿಯಲ್ಲಿ ಹಲವು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬೇರೆ ತಾಲೂಕಿಗೆ ಅಥವಾ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿ ನಿಯಮಾವಳಿಗಳನ್ನು ಪಾಲಿಸಿ, ಸಾಮಾಜಿಕ ನ್ಯಾಯ(SOCIAL JUSTICE) ಒದಗಿಸುವಂತೆ ಕೋರಿದ್ದಾರೆ.
ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುವುದರಿಂದ ಇಲಾಖೆಯ ಘನತೆ, ಗೌರವ ಹಾಳಾಗುತ್ತಿದೆ. ಅಂತಹ ಸಿಬ್ಬಂದಿಗಳಿಂದ ಸಾರ್ವಜನಿಕರ ಕೆಲಸವೂ ಆಗುವುದಿಲ್ಲ. ಇಲ್ಲಿರುವ ಸಿಬ್ಬಂದಿಗಳು, ಸಾರ್ವಜನಿಕರ ಕೆಲಸ ಮಾಡುವುದಕ್ಕಿಂತ ದಲ್ಲಾಳಿಗಳ ಕೆಲಸಕ್ಕೆ ಸೀಮಿತವಾಗಿದ್ದಾರೆ. ಅಲ್ಲಿರುವ ಸಿಬ್ಬಂದಿಗಳ ವರ್ಗಾವಣೆಯು ಸಹಾಯಕ ಆಯುಕ್ತರ ಕಚೇರಿಯಿಂದ ತಹಶೀಲ್ದಾರ ಕಚೇರಿಗೆ, ತಹಶೀಲ್ದಾರ ಕಚೇರಿಯಿಂದ ಸಹಾಯಕ ಆಯುಕ್ತರ ಕಚೇರಿ ಮಾತ್ರ ಸೀಮಿತವಾಗಿ ವರ್ಗಾವಣೆಯಾಗಿದ್ದು, ಇವರ ನೌಕರಿಯು ಕೇವಲ ಭಟ್ಕಳ ತಾಲೂಕಿಗೆ ಮಾತ್ರ ಸೀಮಿತವಾಗಿರುತ್ತದೆ.
ಸರ್ಕಾರ ಆಡಳಿತದಲ್ಲಿ ಪಾರದರ್ಶಕ ತರಲು ತಹಶೀಲ್ದಾರರನ್ನು ಮಾತ್ರ ವರ್ಗಾವಣೆ (TRANSFER)ಮಾಡಿದರೆ, ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಯನ್ನು ತರುವುದು ಕಷ್ಟ. ಇದಕ್ಕೆ ಸಂಬಂಧಿಸಿ ಹಿಂದೆ ಜಿಲ್ಲಾಧಿಕಾರಿಗಳಿಗೆ ಮತ್ತು ಚುನಾವಣಾ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸೆಪ್ಟೆಂಬರ್ 20 ರಂದು ಭಟ್ಕಳ ತಾಲೂಕಾ ಆಡಳಿತ ಸೌಧದ ಎದುರು ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಜಿಲ್ಲಾಧ್ಯಕ್ಷ ಶಂಕರ ನಾಯ್ಕ, ಭಟ್ಕಳ ತಾಲೂಕು ಅಧ್ಯಕ್ಷ ನಾಗೇಂದ್ರ ನಾಯ್ಕ , ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ ಇದ್ದರು.
ಇದನ್ನು ಓದಿ : ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಡಿಂಗಾ ಚಿಕ್ಕಾ..