ಬೆಂಗಳೂರು(BANGLORE) : ರೇಣುಕಾಸ್ವಾಮಿ ಕೊಲೆ Renukaswamy Murder) ಪ್ರಕರಣದ 2ನೇ ಆರೋಪಿ ನಟ ದರ್ಶನ್ (Actor Darshan) ಅವರಿಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.
ಬೆನ್ನುನೋವಿನಿಂದ ಬಳಲುತ್ತಿರುವ ಕಾರಣದಿಂದಾಗಿ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಆರು ವಾರಗಳ ಕಾಲ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ದರ್ಶನ್ ತಮ್ಮ ಆಯ್ಕೆಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಒಟ್ಟಿನಲ್ಲಿ 131 ದಿನಗಳ ಬಳಿಕ ದರ್ಶನ್ ಜೈಲಿನಿಂದ ಹೊರಬರಲಿದ್ದಾರೆ.
ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು. ದರ್ಶನ್ ಬೆನ್ನುಮೂಳೆ ಎಂಆರ್ ಐ ಸ್ಕ್ಯಾನ್ ಮಾಡಿದ್ದು, ಬೆನ್ನಿನ ನರದ ನೂನ್ಯತೆ ಕಂಡು ಬಂದಿದ್ದು, ಡಿಸ್ಕ್ ನಲ್ಲಿನ ಸಮಸ್ಯೆಯಿಂದಾಗಿ ರಕ್ತಪರಿಚಲನೆದಲ್ಲಿ ತೊಂದರೆ ಆಗುತ್ತಿದೆ. ಹಾಗಾಗಿ ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದು ಸಾಮಾನ್ಯ ಚಿಕಿತ್ಸೆಯಿಂದ ಪರಿಹಾರ ಸಾಧ್ಯವಿಲ್ಲ ಎಂದು ವಾದಿಸಲಾಗಿತ್ತು.
ರೋಗಿಯ ಆರೋಗ್ಯ ಪರಿಸ್ಥಿತಿಯನ್ನು ಅನುಮಾನಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಈ ಹಿಂದೆ ಹೇಳಿದ್ದು, ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಿರುವ ಅನೇಕ ಉದಾಹರಣೆಗಳಿವೆ. ಈ ಪ್ರಕರಣ ಕೂಡ ಜಾಮೀನು ನೀಡಲು ಅರ್ಹವಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರ ಪ್ರಕರಣವನ್ನು ಉಲ್ಲೇಖಿಸಿ ವಕೀಲ ನಾಗೇಶ್ ಅವರು ವಾದ ಮಂಡಿಸಿದ್ದರು.
ಇದನ್ನು ಓದಿ : ಚಾರಣಕ್ಕೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ