ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಅಂಕೋಲಾ(Ankola) : ಬೈಕ್(Bike) ಮೇಲೆಮಗನ ಜೊತೆ ಬರುತ್ತಿದ್ದ ವೃದ್ದೆಯೋರ್ವರು ಆಟೋರಿಕ್ಷಾ(Auto Rikshaw) ಢಿಕ್ಕಿಯಾಗಿ ಸಾವನ್ನಪ್ಪಿದ ಧಾರುಣ ಘಟನೆ ಪಟ್ಟಣದಲ್ಲಿ ನಡೆದಿದೆ.

ತಾಲೂಕಿನ ಶಿರಕುಳಿ ಗ್ರಾಮದ(Shirakuli Village) ನಿವಾಸಿ ಲಲಿತಾ ನಾಯ್ಕ (74) ಮೃತಪಟ್ಟ ದುರ್ದೈವಿ. ಅನಾರೋಗ್ಯದ ಹಿನ್ನೆಲೆಯಲ್ಲಿ  ಶನಿವಾರ ಬೆಳಿಗ್ಗೆ ಮಗನ  ಬೈಕ್ ಹಿಂಬದಿಯಲ್ಲಿ ಕುಳಿತು ಆಸ್ಪತ್ರೆಗೆ ಬರುತ್ತಿದ್ದರು. ಇವರ ಬೈಕ್ ಅಂಬಾರಕೊಡ್ಲ(Ambarakodlu) ಬಳಿಯ ತಿರುವಿನಲ್ಲಿ  ಎದುರಿನಿಂದ ಬಂದ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಲಲಿತಾ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಜ್ಞೆತಪ್ಪಿದ್ದರು.

ಕೂಡಲೇ ಅವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ(Ankola Taluku Hospital) ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.  ಆದರೆ, ಗಾಯದ ಸ್ವರೂಪ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾಸ್ಪತ್ರೆಗೆ(Karwar District Hospital) ಕರೆದೊಯ್ಯಲಾಗುತ್ತಿತ್ತು. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವ  ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ(Ankola Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನು ಓದಿ : ಕರ್ತವ್ಯದಲ್ಲಿದ್ದಾಗ ಕುಸಿದು ಬಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು.