ಉಡುಪಿ(Udupi) : ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Ambalapadi National Highway) ಮುಸ್ಸಂಜೆಯ ವೇಳೆ ಬೈಕ್ ಹಾಗೂ ಲಾರಿ (Bike lorry) ನಡುವೆ ಸಂಭವಿಸಿದ ಅಪಘಾತವೊಂದರಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಮಾಜ ಸೇವಕ ವಿಶು ಶೆಟ್ಟಿ ತಕ್ಷಣ ಸ್ಥಳಕ್ಕೆ ಧಾವಿಸಿ ತನ್ನ ಜೀಪಿನಲ್ಲಿಯೇ ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ(Hitec Hospital) ದಾಖಲಿಸುವ ಮೂಲಕ ಬೈಕ್ ಸವಾರರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಬೈಕ್ ಚಲಾಯಿಸುತ್ತಿದ್ದ ನಿಖಿಲ್ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ, ಸಹ ಸವಾರ ಸಂದೀಪ್‌ಗೆ ಪ್ರಜ್ಞೆ ಮರಳಿದೆ. ಈ ಇಬ್ಬರೂ ಪಡುಬಿದ್ರೆ ನಿವಾಸಿಗಳಾಗಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರಿ ಠಾಣೆಯಲ್ಲಿ (Udupi Traffic Station)ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಮನೆ ದರೋಡೆ ಮಾಡಿದ ಆರೋಪಿಗಳಿಗೆ ಶಿಕ್ಷೆ