ಕಾರವಾರ(KARWAR): ರಾಜ್ಯಪಾಲರ ವಿರುದ್ಧ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ(CM SIDDRAMAIHA) ರಾಜೀನಾಮೆಗೆ ಅಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ(CONGRESS GOVERNMENT) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾತನಾಡಿ, ಪೋಲೀಸರ ಸಂಖ್ಯೆ ನಮಗಿಂತ ಜಾಸ್ತಿ ಇದೆ. ಮುಂದಿನ ದಿನಗಳಲ್ಲಿ ನಾವು ತಿಳಿದುಕೊಳ್ಳುತ್ತೇವೆ. ರಾಜ್ಯದ ಮುಖ್ಯಮಂತ್ರಿ ನೇರವಾಗಿ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ಹಗರಣದಲ್ಲಿ ಸಿಲುಕಿದರು ಕೂಡ ತಮ್ಮ ಖುರ್ಚಿ ಬಿಡುತ್ತಿಲ್ಲ. ಅವರು ಭ್ರಷ್ಟಾಚಾರ ಮಾಡಿಲ್ಲ ಅಂದರೆ ಜನ ಯಾಕೆ ಪ್ರತಿಭಟನೆ ಮಾಡುತ್ತಿದ್ದರು. ಎಸ್ಸಿಎಸ್ಟಿ ಪಂಡ್ ಯಾಕೆ ದುರುಪಯೋಗ ಆಗಿದೆ ಎಂಬುದನ್ನ ಸಿಎಂ ತಿಳಿಸಬೇಕೆಂದು ಒತ್ತಾಯಿಸಿದರು. ಸಿಎಂ ಅವರ ಪತ್ನಿ ಹೆಸರಲ್ಲಿ ಮುಡಾ ಹಗರಣ ಆರೋಪಿವಿದ್ದರೂ ಹೈಕಮಾಂಡ್ ರಕ್ಷಣೆ ಮಾಡುತ್ತಿದೆ. ರಾಜ್ಯಪಾಲರನ್ನೆ ದೋಷಿ ಎಂದು ಮಾಡಲು ಕಾಂಗ್ರೆಸ್ ಹೊರಟಿದೆ ಎಂದರು. ಬಿಜೆಪಿಯಿಂದ ರಾಜ್ಯದಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಮಾತನಾಡಿ, ಭ್ರಷ್ಟಾಚಾರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ರಾಜ್ಯಪಾಲರ ವಿಚಾರಣೆಯನ್ನ ಎದುರಿಸಬೇಕು. ತಮ್ಮ ಅಧಿಕಾರಕ್ಕೆ ಕುತ್ತು ಬರುತ್ತದೆಂದು ತಿಳಿದು ರಾಜ್ಯಪಾಲರ ವಿರುದ್ದವೇ ಕಾಂಗ್ರೆಸ್ ನಡೆದುಕೊಳ್ಳುತ್ತಿದೆಯೆಂದು ಆರೋಪಿಸಿದರು. ಸಿಎಂ ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿದ್ದಾರೆ. ಹೀಗಾಗಿ ಸಿಎಂ ತಮ್ಮ ರಾಜ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೆಕರ್, ಮಹಿಳಾ ನಾಯಕಿ ಶಿವಾನಿ ಶಾಂತಾರಾಮ್ ಸೇರಿ ಇತರರು ಮಾತನಾಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನು ಓದಿ : ರಾಷ್ಟ್ರೀಯ ಹಸಿರು ಪೀಠ ಅಭಿಪ್ರಾಯ.