ಭಟ್ಕಳ : ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಎಳೆದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪಟ್ಟಣದ ಐಬಿಯಿಂದ ಕಾರನ್ನು ಹಗ್ಗದ ಮೂಲಕ ಹೆದ್ದಾರಿಯಲ್ಲಿ ಎಳೆದು ಸಂಶುದ್ದಿನ್ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಬಳಿಕ ಸೇರಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉಚಿತ ಭಾಗ್ಯಗಳ ಹೆಸರಲ್ಲಿ ಲೂಟಿ ಮಾಡಲು ಹೋರಾಟ ಕಾಂಗ್ರೆಸ್ ಸರ್ಕಾರವು ಆಡಳಿತ ನಡೆಸಲು ಸಾಧ್ಯವಾಗದೆ ಕರ್ನಾಟಕವನ್ನು ಶೋಚನೀಯ ಸ್ಥಿತಿಗೆ ತಂದಿದೆ. ಈಗಾಗಲೇ ಎಲ್ಲಾ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ಬಡವನ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸರ್ಕಾರ ಈಗ ಮತ್ತೆ ತೈಲ ಬೆಲೆಯನ್ನು ಏರಿಸಿ ಈ ಮೂಲಕ ಇನ್ನೊಮ್ಮೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುವಂತೆ ಮಾಡಿದೆ.  ಕಾಂಗ್ರೆಸ್ ಸರ್ಕಾರದ ಆಡಳಿತದದಿಂದ ಜನ ಸಾಮಾನ್ಯರು ಕಣ್ಣೀರು ಹಾಕುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಮುಖಂಡ ಗೋವಿಂದ ನಾಯ್ಕ, ಬಿಜೆಪಿ ತಾಲೂಕಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಮುಖಂಡರಾದ ಶ್ರೀಕಾಂತ ನಾಯ್ಕ, ದಿನೇಶ್ ನಾಯ್ಕ್, ಶಿವಾನಿ ಶಾಂತಾರಾಮ್, ಸುರೇಶ ಕೋಣೆಮನೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎಸಿ ಡಾ ನಯನಾ ಅವರಿಗೆ ಮನವಿ ಸಲ್ಲಿಸಲಾಯಿತು.