ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಶಿರಸಿ(Sirsi) : ಉತ್ತರಕನ್ನಡ ಜಿಲ್ಲೆಯ ಶಿರಸಿ(Sirsi) ತಾಲೂಕಿನ ಮತ್ತೀಘಟ್ಟಾ(Mattighattta) ಸಮೀಪದ ಹಸೆಮನೆ ಘಾಟ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು(College Students) ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.

ದಾವಣಗೆರೆಯ ಜೈನ್ ಕಾಲೇಜಿನ(Davanagere Jain College) ವಿದ್ಯಾರ್ಥಿಗಳು ಪ್ರವಾಸದ ನಿಮಿತ್ತ ವಿಭೂತಿ ಫಾಲ್ಸ್‌ಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ 12 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಇತರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ತಕ್ಷಣವೇ ಅಂಕೋಲಾ(Ankola) ಮತ್ತು ಶಿರಸಿ ಸರ್ಕಾರಿ ಆಸ್ಪತ್ರೆಗೆ(Sirsi Government Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಶಿರಸಿ ಗ್ರಾಮೀಣ ಪೊಲೀಸ್ ಠಾಣಾ(Sirsi Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನು ಓದಿ : ಆಟೋದಲ್ಲಿನ ಸಿಲಿಂಡರ್ ಸ್ಪೋಟ. ಬಾರೀ ಬೆಂಕಿ. ವ್ಯಾಪಕ ಹಾನಿ.

ಕುಮಟಾ-ಶಿರಸಿ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಗ್ರೀನ್ ಸಿಗ್ನಲ್.

ಶಾಸಕ ಸತೀಶ ಸೈಲ್ ರಿಂದ ಡಿಸಿಎಂ ಗೆ ದುಬಾರಿ ಗಿಪ್ಟ್ ನೀಡಿ ಗೌರವ.