ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕುಮಟಾ(Kumta) : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ(Car Collision) ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ(NH 66) ಬರ್ಗಿ ಬಳಿ ನಡೆದಿದೆ.
ಮೃತರನ್ನು ಕುಮಟಾ(Kumta) ತಾಲೂಕಿನ ಶಶಿಹಿತ್ತಲ ನಿವಾಸಿ ದುರ್ಗಿ ಹರಿಕಾಂತ (70) ಎಂದು ಗುರುತಿಸಲಾಗಿದೆ. ದುರ್ಗೀ ಹರಿಕಾಂತ ಅವರು ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿದು ಗೋಕರ್ಣ ಪೊಲೀಸರು(Gokarn Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Accident/ ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು
