ಮುಂಬೈ(MUMBAI) :  ಉತ್ತರಕನ್ನಡ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಹಾಗೂ ಜೆಡಿಎಸ್ ಮುಖಂಡರಾದ ಚೈತ್ರಾ ಚಂದ್ರಹಾಸ ಕೋಠಾರಕರ (CHAITRA CHANDRAHAS KOTARKAR) ಅವರ ರಾಜಕೀಯ ಹಾಗೂ ಸಮಾಜಸೇವೆ ಗುರುತಿಸಿ ಕನ್ನಡಪ್ರಭ (KANNADAPRABHA) ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್(ASIA NET SUVARN NEWS) ಮುಂಬೈನಲ್ಲಿ ಏರ್ಪಡಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ನಾರ್ಥ್ ಕರ್ನಾಟಕ ಅಚೀವರ್ಸ್ ಅವಾರ್ಡ್ -2024 (NORTH KARNATAKA ACHIEVERS AWARD)ಪ್ರದಾನ ಮಾಡಿದೆ.

ಮುಂಬೈನ ಪೋವೈನಲ್ಲಿನ ಅಥೆನಾ ಬೆಂಕ್ವೆಟ್ ಸಭಾಭವನದಲ್ಲಿ ಏಷ್ಯಾನೆಟ್ ಮೀಡಿಯಾ (MEDIA) ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿತ್ತು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(EX CM BASAVARAJ BOMMAI), ಚಿತ್ರನಟ ನವೀನ ಶಂಕರ್, ಕನ್ನಡಪ್ರಭ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಚೈತ್ರಾ ಕೋಠಾರಕರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಮಾಡಿದ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ, ಪ್ರಶಸ್ತಿ ಪುರಸ್ಕೃತರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನಷ್ಟು ಉತ್ಸಾಹದಿಂದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಕಿವಿ ಮಾತು ಹೇಳಿದರು.

ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಮಾತನಾಡಿ, ಪ್ರಶಸ್ತಿ ಪಡೆದವರನ್ನು ಪ್ರಶಂಸಿಸಿದರು.  ಸುವರ್ಣ ನ್ಯೂಸ್ ಚೀಫ್ ಆಂಕರ್ ಭಾವನಾ ನಾಗಯ್ಯ ಕಾರ್ಯಕ್ರಮ ನಿರ್ವಹಿಸಿದರು.

ಚೈತ್ರಾ ಕೋಠಾರಕರ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಡಿಜಿಟಲ್ ಕ್ಲಾಸ್ ಆರಂಭ ಮಾಡಿದ್ದರು. ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಶ್ರಮಿಸಿದ್ದರು. ಕೊರೋನಾ ಹಾಗೂ ಪ್ರವಾಹದ ಸಂದರ್ಭದಲ್ಲಿ ಜನರೊಂದಿಗೆ ನಿಂತಿದ್ದಲ್ಲದೆ ವೈಯಕ್ತಿಕವಾಗಿ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದರು.

ಕೋವಿಡ್ ಸಮಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬಂದಾಗ ಅದನ್ನು ಹೇಗೆ ಎದುರಿಸಬೇಕು. ಮುಂಜಾಗರೂಕತಾ ಕ್ರಮ ಏನೆಲ್ಲ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಿದ್ದಲ್ಲದೆ, ಪರೀಕ್ಷಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳು, ಪಾಲಕರಲ್ಲಿ ಆತ್ಮವಿಶ್ವಾಸ, ಸ್ಥೈರ್ಯ ಹೆಚ್ಚುವಂತೆ ಕ್ರಮ ಕೈಗೊಂಡಿದ್ದು ಎಲ್ಲರ ಶ್ಲಾಘನೆಗೆ ಪಾತ್ರವಾಗಿತ್ತು.

ಹಳ್ಳಿಗಾಡಿನ ಜನತೆಗೆ ಸೂಕ್ತ ಆರೋಗ್ಯ ಸೇವೆ ಲಭಿಸದೆ ತೊಂದರೆಯಲ್ಲಿರುವುದನ್ನು ಗಮನಿಸಿದ ಚೈತ್ರಾ ಕೊಠಾರಕರ ಪ್ರತಿಯೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಆಸಕ್ತಿ ವಹಿಸಿ ಕಾರ್ಯೋನ್ಮುಖರಾದರು. ಹೀಗೆ ಜಿಲ್ಲೆಯ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೆ ಆದ ಕೊಡುಗೆ ನೀಡಿದ್ದಾರೆ. ಇಂತಹ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಚೈತ್ರಾ ಕೋಠಾರಕರ ಅವರಿಗೆ ಪ್ರಶಸ್ತಿ ನೀಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚೈತ್ರಾ ಚಂದ್ರಹಾಸ ಕೋಠಾರಕರ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಈ ಪ್ರಶಸ್ತಿ ನೀಡಿರುವುದು ಸಂತಸವಾಗಿದೆ. ಇದರಿಂದ ಇನ್ನಷ್ಟು ಜವಾಬ್ದಾರಿ ಹೆಚ್ಚಿದೆ. ಮುಂಬರುವ ದಿನಗಳಲ್ಲಿ ಇನ್ನೂ  ಉತ್ಸಾಹದಿಂದ ಸಮಾಜಸೇವೆಯಲ್ಲಿ ತೊಡಗಿಕೊಳ್ಳುತ್ತೇನೆಂದು ಹೇಳಿದರು.

ಇದನ್ನು ಓದಿ :
ರತನ್ ಟಾಟಾ ನಿಧನಕ್ಕೆ ಪ್ರೇಯಸಿ ಬಾವುಕ ವಿದಾಯ

ಅವಿವಾಹಿತ ಉದ್ಯಮಿ ರತನ್ ಟಾಟಾ ಜೀವನ ಸಾಧನೆಯೇ ರೋಚಕ

ಕಾರವಾರದಲ್ಲಿ ಡ್ರೋನ್ ಹಾರಾಟದ ಜಾಡು ಹಿಡಿದು ಸಾಗಿದ ಇಂಟೆಲಿಜೆನ್ಸಿ

ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ