ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಬೆಂಗಳೂರು(Bangalore) : ಕರ್ನಾಟಕದ ನೂತನ ಮುಖ್ಯಮಂತ್ರಿ(Chief Minister) ಆಗಿ ಅಧಿಕಾರ ಸ್ವೀಕರಿಸಿದ  ಡಿಕೆ ಶಿವಕುಮಾರ್‌(D K Shivakumar) ಅವರು ಮೊದಲ ಸಚಿವ ಸಂಪುಟ(Cabinet) ಸಭೆಯಲ್ಲಿ  ಅನೇಕ ಮಹತ್ವದ ನಿರ್ಧಾರಗಳನ್ನು ಘೋಷಿಸಿದ್ದಾರೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ(School College Students) ಉಚಿತ ಬಸ್‌ ಪಾಸ್‌ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ. ಅದೇ ರೀತಿ ನಿರುದ್ಯೋಗ ಯುವಕರಿಗೆ ಉದ್ಯೋಗ ತರಬೇತಿ ನೀಡುವ ತೀರ್ಮಾನವನ್ನೂ ಕೈಗೊಂಡಿರುವುದಾಗಿ ಡಿಕೆಶಿ ತಿಳಿಸಿದ್ದಾರೆ

ಸರ್ಕಾರಿ ಬಸ್‌ಗಳಲ್ಲಿ(Government Buses) ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಯೋಜನೆಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ(Rural and Town Area) ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪಾಸ್ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ.

ಯುವಕರ ಉದ್ಯೋಗ ಸಮಸ್ಯೆಗೆ (Employment Problem) ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ತರಬೇತಿ ನೀಡಿ, ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮವನ್ನು ಆರಂಭಿಸಲಾಗುವುದು.

ಬೆಂಗಳೂರು ನಗರದ(Bangalore Town) ರಸ್ತೆ ಅಭಿವೃದ್ಧಿಗೆ ಸರ್ಕಾರ 2,000 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಾಳಾಗಿರುವ ರಸ್ತೆಗಳ ದುರಸ್ತಿ ಹಾಗೂ ಡಾಂಬರೀಕರಣ ಕಾಮಗಾರಿಗಳಿಗೆ ಈ ಅನುದಾನ ಬಳಕೆಯಾಗಲಿದ್ದು, ನಗರ ಸಂಚಾರ ವ್ಯವಸ್ಥೆ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು.

ಮೂರು ಅಂತಸ್ತಿನ ಹಾಗೂ 2,500 ಚದರ ಅಡಿವರೆಗಿನ ಮನೆಗಳಿಗೆ ಓಸಿ (Occupancy Certificate) ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ(Chief Minister Declared). ಇದರಿಂದ ಹಲವು ಮನೆ ಮಾಲೀಕರಿಗೆ ಆಡಳಿತಾತ್ಮಕ ತೊಂದರೆ ಕಡಿಮೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದ ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಸೌಲಭ್ಯವನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ.

ಯುವಜನರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಭಾರತ್ ಜೋಡೋ(Bharat Jodo) ಯುವಕರ ಸಂಘ ಸ್ಥಾಪನೆ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಯುವಶಕ್ತಿಯನ್ನು ಸಂಘಟಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಹೊಸ ಚೈತನ್ಯ ಮೂಡಿಸುವ ಗುರಿಯನ್ನು ಹೊಂದಿದೆ.

ಮೊದಲ ಸಂಪುಟ ಸಭೆಯಲ್ಲೇ ಘೋಷಿಸಲಾದ ಈ ಆರು ನಿರ್ಧಾರಗಳು ಸರ್ಕಾರದ ಮುಂದಿನ ದಿಕ್ಕನ್ನ ಬದಲಾಯಿಸುವ ಸಾಧ್ಯತೆ ಇದೆ.

ಇದನ್ನು ಓದಿ : ಅಪ್ರಾಪ್ತ ಬಾಲಕನಿಗೆ ವಾಹನ ಕೊಟ್ಟ ವ್ಯಕ್ತಿಗೆ 25 ಸಾ. ರೂ ದಂಡ.