ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiha) ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು(Devaraj Aras) ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತಿ ಹೆಚ್ಚು ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ(State Chief Minister) ಆಡಳಿತ ನಡೆಸಿದ ನಾಯಕನೆಂದು ಇತಿಹಾಸ(History) ನಿರ್ಮಿಸಿದ್ದಾರೆ.
ರಾಜ್ಯದಲ್ಲಿ ಸಾಮಾಜಿಕ ನ್ಯಾಯ(Social Justice) ನೀಡಿ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಒಟ್ಟು 2,792 ದಿನಗಳ ಕಾಲ ಅವರು ಅಧಿಕಾರದಲ್ಲಿದ್ದರು. ದೇವರಾಜ ಅರಸ್(Devaraj Aras) ಅವರು 1972ರ ಮಾರ್ಚ್ 20 ರಿಂದ 1980ರ ಜನವರಿ 12 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.
ಇನ್ನೂ ಸಿಎಂ ಸಿದ್ದರಾಮಯ್ಯ(CM Siddaramaiha) ಅವರು 2 ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. 2013ರ ಮೇ, 13 ರಿಂದ 2018ರ ಮೇ, 17 ರವರೆಗೆ ಬರೋಬ್ಬರಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಳ್ವಿಕೆ ನಡೆಸಿದ್ದರು. ಇನ್ನೂ 2ನೇ ಅವಧಿಯಲ್ಲಿ 2023ರ ಮೇ, 20 ರಿಂದ ಇಂದಿನವರೆಗೂ ಸಿದ್ದರಾಮಯ್ಯ ಸಿಎಂ ಮುಂದುವರಿದಿದ್ದಾರೆ.
ಮಾರ್ಕ್ಸ್ ಸಿದ್ದಾಂತ, ಸಾಹಿತ್ಯ, ಕಲೆ ಬಗ್ಗೆ ಅಳವಾದ ಜ್ಞಾನ ದೇವರಾಜ ಅರಸ್ ಅವರಿಗೆಇತ್ತು. ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇತ್ತು. ಹಿಂದುಳಿದ ಸಮುದಾಯಗಳನ್ನು ಗುರುತಿಸಿ ರಾಜಕೀಯ ಪ್ರಾತಿನಿಧ್ಯವನ್ನು, ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಅರಸ್ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiha) ರಾಜ್ಯದಲ್ಲಿ ಭಾಗ್ಯಗಳ ಸರದಾರರಾಗಿದ್ದಾರೆ. ಮೊದಲ ಅವಧಿಯಲ್ಲೇ ಅನ್ನಭಾಗ್ಯ ಯೋಜನೆ(Annabhagya Scheme ) ಜಾರಿಗೆ ತಂದಿದ್ದರು. ಎರಡನೇ ಅವಧಿಯಲ್ಲೂ ಪಂಚ ಗ್ಯಾರಂಟಿಗಳನ್ನು(Guarantees) ಜಾರಿಗೊಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ 06-01-2026ರಂದು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದು , ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಇತಿಹಾಸ ಸೃಷ್ಟಿಸಿದ್ದಾರೆ.
2018 ರಿಂದ 2023ರ ವರೆಗೆ ಮೊದಲ 14 ತಿಂಗಳ ಕಾಲ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್(JDS-Congres) ಸಮ್ಮಿಶ್ರ ಸರಕಾರವಿತ್ತು. ನಂತರ ರಚನೆಯಾದ ಸರಕಾರದಲ್ಲಿ ಕ್ರಮವಾಗಿ ಬಿ.ಎಸ್.ಯಡಿಯೂರಪ್ಪ(B S Yadiyurappa), ಬಸವರಾಜ ಬೊಮ್ಮಾಯಿ(Basavaraj Bommai ) ಸಿಎಂ ಆಗಿದ್ದರು.
20230 ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಪುನಃ ಜನಾದೇಶ ಸಿಕ್ಕಿ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ 16 ಬಜೆಟ್ ಮಂಡಿಸಿ ರಾಜ್ಯಕ್ಕೆ ಅತಿಹೆಚ್ಚು ಮುಂಗಡ ಪತ್ರ ಕೊಟ್ಟ ದಾಖಲೆ ಮಾಡಿದ್ದಾರೆ. ಈ ಬಾರಿ 2026-27ರ 17ನೇ ಆಯವ್ಯಯ ಮಂಡಿಸಲು ಸಿದ್ದತೆ ನಡೆಸಿದ್ದಾರೆ.
ಇದನ್ನು ಓದಿ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬೊಲೆರೋ ವಾಹನ ಸಂಪೂರ್ಣ ಸುಟ್ಟು ಕರಕಲು.
