ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮಂಗಳೂರು(Manglore): ಗ್ರಾಮ ಪಂಚಾಯತ್(Grama panchayat) ಸದಸ್ಯರು ಹಾಗೂ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿಯಾದ ಘಟನೆ ದ.ಕ ಜಿಲ್ಲಾ ಕಾಂಗ್ರೆಸ್ (Dakshinakannada Congres Comitee)ಕಚೇರಿಯಲ್ಲಿ ನಡೆದಿದೆ.
ಗ್ರಾಮಪಂಚಾಯತ್ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್(Zilla panchayat) ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ಮಧ್ಯೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಉಪಚುನಾವಣೆಯಲ್ಲಿ ಗೆದ್ದವರಿಗೆ ವೇದಿಕೆಯ ಮೇಲೆ ಸನ್ಮಾನಿಸಬೇಕು ಎಂದು ಪ್ರಕಾಶ್ ಚಂದ್ರ ಶೆಟ್ಟಿ ತುಂಬೆ ಸಲಹೆ ನೀಡಿದ್ದರು. ಜಿಲ್ಲಾಧ್ಯಕ್ಷ ಹರೀಶಕುಮಾರ್ ಗೆದ್ದ ಅಭ್ಯರ್ಥಿಗಳು ಕುಳಿತಲ್ಲೇ ಸನ್ಮಾನಿಸಲಾಗುವುದು ಎಂದಾಗ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಮಿಲಾಯಿಸಿಕೊಂಡು ಜಗಳವಾಗಿದೆ.
ಹೀಗಾಗಿ ಪಕ್ಷದ ಜಿಲ್ಲಾ ನಾಯಕರ ನಡುವೆ ಕೆಲವು ದಿನದಿಂದ ನಡೆಯುತ್ತಿರುವ ಮುಸುಕಿನ ಗುದ್ದಾಟ ಇಂದು ಬಯಲಿಗೆ ಬಂದಂತಾಗಿದೆ. ಕೆಪಿಸಿಸಿ(KPCC) ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ಎಂಎಲ್‌ಸಿ ಐವಾನ್ ಡಿಸೋಜ, ಮಿಥುನ್ ರೈ, ಇನಾಯತ್ ಅಲಿ ಉಪಸ್ಥಿತರಿದ್ದ ಸಭೆಯಲ್ಲೇ ಮುಖಂಡರಲ್ಲಿ ಹೊಯ್ ಕೈ ಉಂಟಾಗಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗಗೊಂಡಂತಾಗಿದೆ.
ಇದನ್ನು ಓದಿ : ಚಂಡಮಾರುತ ಅಬ್ಬರ. ಶಾಲಾ ಕಾಲೇಜುಗಳಿಗೆ ರಜೆ
ರಸ್ತೆ ಅಪಘಾತದಲ್ಲಿ ಯುವ ಪೊಲೀಸ್ ಅಧಿಕಾರಿ ದುರ್ಮರಣ
ಹಸು ಹುಡುಕಲು ಹೋದ ಮೂವರು ಮಹಿಳೆಯರು ನಾಪತ್ತೆ
ಈಜಲು ತೆರಳಿದ ಸ್ನೇಹಿತರಿಬ್ಬರ ಸಾವು