ಮಂಗಳೂರು(MANGLORE) :  ಕೂಳೂರು ಸೇತುವೆ(KULURU BRIDGE) ಮೇಲೆ ಬಿಎಂ ಡಬ್ಲೂ (BMW)ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ  ಮೃತದೇಹ  ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ.

ಸ್ಥಳೀಯ ಮೀನುಗಾರರ ದೋಣಿಗೆ ಮೃತದೇಹ ಲಭಿಸಿದೆ.
ರಕ್ಷಣಾ ತಂಡಗಳಾದ ಎನ್ಡಿಆರ್ಎಫ್(NDRF), ಎಸ್ಡಿಆರ್ಎಫ್(SDRF), ಕೋಸ್ಟ್ ಗಾರ್ಡ್(COAST GUARD), ಈಶ್ವರ್ ಮಲ್ಪೆ (ISHWAR MALPE) ತಂಡ ಸೇರಿದಂತೆ ಸ್ಥಳೀಯ ನಾಡದೋಣಿ ಮೀನುಗಾರರು  ತೀವ್ರ ಶೋಧ ನಡೆಸಿದ್ದರು. ಮಂಗಳೂರಿನ ಕೂಳೂರು ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. 

ಉದ್ಯಮಿ ಮುಮ್ತಾಝ್ ಅಲಿ ಅವರನ್ನು ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಓರ್ವ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಮುಮ್ತಾಝ್  ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ

ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ರೆಹಮತ್ ಸೇರಿದಂತೆ, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತಾರ್ ಅವರ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ನನ್ನ ಸಹೋದರ ಮುಮ್ತಾಝ್ ಅಲಿ ಸಮಾಜದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿದ್ದರು. ಸಮಾಜ ಸೇವೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಹಲವು ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಾಗಿದ್ದು, ಅವರ ಪ್ರಸಿದ್ಧಿಯನ್ನು ಹಾಳು ಮಾಡುವ ಉದ್ದೇಶದಿಂದ ಆರೋಪಿಗಳೆಲ್ಲರೂ ಸೇರಿಕೊಂಡು ಅವರು ಆತ್ಮಹತ್ಯೆಗೆ ಶರಣಾಗುವಂತೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ರೆಹಮತ್ ಎಂಬವರು ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರ ಮಾಡಿ ಹೆಸರನ್ನು ಹಾಳು ಮಾಡುತ್ತೇನೆ ಎಂದು ಹೆದರಿಸಿ ಕಳೆದ ಜುಲೈನಿಂದ  ಇವರೆಗೆ ಸುಮಾರು 50 ಲಕ್ಷ ರೂ.ಗಿಂತಲು ಅಧಿಕ ಮೊತ್ತವನ್ನು ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಬೆದರಿಸಿ 25 ಲಕ್ಷ ರೂ. ಹಣವನ್ನು ಚೆಕ್ ಮೂಲಕ ಪಡೆದುಕೊಂಡಿದ್ದಾರೆ ಎಂದು ಹೈದರ್ ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಗಳು ಮೊದಲು ಮುಮ್ತಾಝ್ ಅಲಿಗೆ ದೈಹಿಕವಾಗಿ ಹಲ್ಲೆ ಮಾಡಿದ್ದರು. ಸತ್ತಾರ್ ಎಂಬಾತ ಮುಮ್ತಾಝ್ ಅಲಿ ಅವರ ರಾಜಕೀಯ ವಿರೋಧಿಯಾಗಿದ್ದು, ಅವರನ್ನು ರಾಜಕೀಯವಾಗಿಯೂ ಮುಗಿಸಬೇಕೆಂದು ರೆಹಮತ್ ಅವರೊಂದಿಗೆ ಸೇರಿಕೊಂಡು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ.

ರೆಹಮತ್ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಇದೆ ಎಂದು ಪ್ರಚಾರ ಮಾಡುವುದಾಗಿ ಬೆದರಿಸಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಾ, ನಿರಂತರ ಕಿರುಕುಳ ನೀಡಿ ಹಣವನ್ನು ನೀಡದಿದ್ದರೆ ಕೊಲೆ ಮಾಡುವುದಾಗಿ ಆರೋಪಿಗಳು ಹೆದರಿಸಿದ್ದರು. ಕುಟುಂಬದ ಸದಸ್ಯರಿಗೂ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಮಾಜಿ ಶಾಸಕ ಮೊಯ್ದೀನ್ ಬಾವಾ (MOYIDDIN BAVA) ಅವರ ಸಹೋದರರಾಗಿರುವ ಮುಮ್ತಾಝ್ ಅಲಿ ಅವರು ರವಿವಾರ ಬೆಳಗ್ಗಿನ ಜಾವ ಮೂರು ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಕಾರು ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು.

ಇದನ್ನು ಓದಿ : ನಾನು ಹಿಂತಿರುಗಿ ಬರುವುದಿಲ್ಲ

ಗೋವಾ ಪೊಲೀಸರ ಕಾರ್ಯಾಚರಣೆ

ಮುರ್ಡೇಶ್ವರ ಕಡಲತೀರ ಬಂದ್

ದೇವಸ್ಥಾನದ ಚಿನ್ನ ಕದ್ದ ಅರ್ಚಕ