ಬೆಂಗಳೂರು (BANGLORE): ರಾಜ್ಯದ ಮುಖ್ಯಮಂತ್ರಿ(CHIEF MINISTER) ಸಿದ್ದರಾಮಯ್ಯ(SIDDARAMAIHA) ಅವರಿಗೆ ಟೆಂಕ್ಷನ್ ಶುರುವಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅನುಮತಿ ನೀಡಿರುವುದನ್ನು ಹೈ ಕೋರ್ಟ್ (HIGHCOURT) ಎತ್ತಿ ಹಿಡಿದಿದೆ.
ರಾಜ್ಯಪಾಲರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದರಿಂದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ.
ಆಗಸ್ಟ್ 17ರಂದು ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ನಿರ್ಧಾರದಿಂದ ಈಗ ರಾಜ್ಯದಲ್ಲಿ ಬಿಜೆಪಿಗೆ ಕಾಂಗ್ರೆಸ್ ವಿರುದ್ಧ ಹೋರಾಡಲು ಅಸ್ತ್ರ ಸಿಕ್ಕಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ(BJP) ಕಾರ್ಯಕರ್ತರು ಮತ್ತೆ ಬೀದಿಗಿಳಿಯಲು ಸಿದ್ಧತೆ ನಡೆಸಿದ್ದಾರೆ.
ಇದನ್ನು ಓದಿ : ಉದ್ಯಮಿ ಹತ್ಯೆ ಆರೋಗಳ ಕಾರು ಬೆನ್ನತ್ತಿದ ಪೊಲೀಸರು