ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕೋಲ್ಕತ್ತಾ (Kolkatta): ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ(Trainee Doctor) ಅತ್ಯಾಚಾರ ಮತ್ತು ಕೊಲೆ (Rape and Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್ ರಾಯ್ನನ್ನು ದೋಷಿ ಎಂದು ಕೋರ್ಟ್ ತೀರ್ಪು (Court Order) ಪ್ರಕಟಿಸಿದೆ.

ಇಂದು ಕೋಲ್ಕತ್ತಾ ಸೆಸೆನ್ಸ್ ಕೋರ್ಟ್(Kolkatta Session Court) ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. 57 ದಿನಗಳಲ್ಲಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ನೀಡಿದೆ.
ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದೇಶಾದ್ಯಂತ(Countrywide) ಪ್ರತಿಭಟನೆ ನಡೆದಿತ್ತು. ಹೀಗಾಗಿ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(CM Mamata Byanarjee) ಸಿಬಿಐ ತನಿಖೆಗೆ(CBI Investigation) ಒಪ್ಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅತ್ಯಾಚಾರ ನಡೆದಿದ್ದು ದೃಢ ಎಂದು ಚಾರ್ಜ್ಶೀಟ್ ಸಲ್ಲಿಸಿತ್ತು.
ಕಳೆದ ಆಗಸ್ಟ್ 9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ(Postgradute) ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್ನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ ನಾಲ್ಕು ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಇದೀಗ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದೆ.
ಇದನ್ನು ಓದಿ : ಯಕ್ಷ ದಿಗ್ಗಜನ ಆಸೆ ಈಡೇರಿಸಿದ ಹಿರಿಯ ನಟಿ.
ಗ್ರಾಮೀಣ ಸೊಗಡಿನ ಕೊಗ್ತಿ ಜಾತ್ರೆ ಸಂಪನ್ನ.