ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಸೂರತ್(surat):  ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ ಗರ್ಭಿಣಿಯಾಗಿದ್ದ  ಶಿಕ್ಷಕಿಯ ಗರ್ಭಪಾತಕ್ಕೆ(Abortion)  ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ(Pocso Court) ಅನುಮತಿ ನೀಡಿದೆ.

13 ವರ್ಷದ ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಕೇಸ್‌ನಲ್ಲಿ 23 ವರ್ಷದ ಶಿಕ್ಷಕಿ ವಿರುದ್ಧ ಪೋಕ್ಸ್‌ ಕಾಯ್ದೆಯಡಿ ದೂರು ದಾಖಲಾಗಿದ್ದು, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ.  ಇದೀಗ ಕೋರ್ಟ್ ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಿದೆ.

ಸೂರತ್‌ ನಗರದ ಪುಣೆ ಪೊಲೀಸ್ ಠಾಣೆಯಲ್ಲಿ  ಕಳೆದ ಏಪ್ರಿಲ್‌ ತಿಂಗಳಲ್ಲಿ 13 ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿತ್ತು. ಬಾಲಕನ ತಂದೆಯೇ ಈ ದೂರನ್ನು ನೀಡಿದ್ದರು. ಈ ದೂರಿನಲ್ಲಿ ಶಾಲೆ ಮತ್ತು ಟ್ಯೂಷನ್ ಶಿಕ್ಷಕಿ (Toution Teacher) ಮೇಲೆಯೇ ಬಾಲಕನ ತಂದೆ ಅನುಮಾನ ವ್ಯಕ್ತಪಡಿಸಿದ್ದರು. ದೂರಿನ ಅನ್ವಯ ಪೊಲೀಸರು ನಗರದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದರು. ಕೊನೆಗೆ ಏ. 30ರಂದು ಜೈಪುರದಿಂದ(Jaipur) ಹಿಂದಿರುಗುತ್ತಿದ್ದಾಗ ಶಮ್ಲಾಜಿ ಗಡಿ ಬಳಿಯಲ್ಲಿ ಶಿಕ್ಷಕಿ ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿತ್ತು. ಇಬ್ಬರು ಬಸ್‌ನಲ್ಲಿ ತೆರಳುತ್ತಿರುವಾಗಲೇ  ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು.

ವಿದ್ಯಾರ್ಥಿಗೆ ಶಾಲೆಯಲ್ಲಿ ಮತ್ತು ಟ್ಯೂಷನ್ ತರಗತಿಯಲ್ಲಿ ಕಲಿಸುತ್ತಿದ್ದ ಶಿಕ್ಷಕಿ ಮತ್ತು ವಿದ್ಯಾರ್ಥಿ ಮಾಗೋಬ್ ಪ್ರದೇಶದ ಒಂದೇ ಹೌಸಿಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ವಿದ್ಯಾರ್ಥಿಯ ಕುಟುಂಬವು ರಾಜಸ್ಥಾನ ಮೂಲದವರಾಗಿದ್ದರೆ(Rajasthana Native) , ಶಿಕ್ಷಕಿ ಮೆಕ್ಸಾನಾ ಮೂಲದವಳಾಗಿದ್ದಾಳೆ. ಕಳೆದ ಮೂರು ವರ್ಷಗಳಿಂದ ಶಿಕ್ಷಕಿ  ವಿದ್ಯಾರ್ಥಿಗೆ ಪಾಠ ಹೇಳಿಕೊಡುತ್ತಿದ್ದಳು.

ಬಂಧನದ ನಂತರ ಶಿಕ್ಷಕಿಯನ್ನು ವಿಚಾರಣೆಗೊಳಪಡಿಸಿದಾಗ, ಬಾಲಕನೊಂದಿಗೆ ದೈಹಿಕ ಸಂಬಂಧ ಬೆಳೆಸಿರುವುದನ್ನು ಒಪ್ಪಿಕೊಂಡಿದ್ದಳು. ಶಿಕ್ಷಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆಕೆ ಇಪ್ಪತ್ತು ವಾರ, ನಾಲ್ಕು ದಿನದ ಗರ್ಭಿಣಿ(Pragnent) ಎಂಬುದು ದೃಢವಾಗಿತ್ತು.

ಇದನ್ನು ಓದಿ : ಪ್ರಧಾನಿ  ಅವರ ಅವಮಾನಕಾರಿ ದೃಶ್ಯದ ಫೇಸ್ ಬುಕ್ ಲಿಂಕ್  ಶೇರ್ ಮಾಡಿದ್ದ ವ್ಯಕ್ತಿಯ ಬಂಧನ.

ಲಕ್ಷ ದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆ.

ಎರಡು ವರ್ಷ ಕಳೆದ ʼಗ್ಯಾರಂಟಿ ಬದುಕುʼ ಸರ್ಕಾರದ ವಿಭಿನ್ನ ಜಾಹಿರಾತು.