ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಶಿರಸಿ(Sirsi) : ತಾಲೂಕಿನ ದೇವನಳ್ಳಿ(Devanalli) ಸಮೀಪದ ಬಿಳಿಗೆರೆ ಗ್ರಾಮದಲ್ಲಿ ರಾತ್ರೋರಾತ್ರಿ ಎಂಟು ದನಗಳನ್ನು ಕಳ್ಳರು(Cattle Theives) ಅಪಹರಿಸಿರುವ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದ ಸುಬ್ಬಾ ರಾಮಾ ಗೌಡ ಹಾಗೂ ನರಸಿಂಹ ಬೀರಾ ಗೌಡ ಅವರಿಗೆ ಸೇರಿದ ಹಸುಗಳನ್ನು(Cows) ರಾತ್ರಿ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಸ್ಥಿತಿಯಲ್ಲೇ ಕಳ್ಳರು ಕದ್ದುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಎದ್ದು ಕೊಟ್ಟಿಗೆಗೆ ಹೋದಾಗ  ದನಗಳು ಕಾಣಿಸದೇ ಇದ್ದುದರಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಗಾಬರಿಗೊಂಡರು. ಆತಂಕ ಮೂಡಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮ ಪಂಚಾಯತ್ ಸದಸ್ಯರು(Grama panchayat Members) ಹಾಗೂ ಹಿಂದೂ ಕಾರ್ಯಕರ್ತರು ಆಗಮಿಸಿ ಪರಿಶೀಲನೆ ನಡೆಸಿದರು. ಗೋ ಕಳ್ಳತನ(Cattle Theft) ಪ್ರಕರಣಗಳು ಹೆಚ್ಚುತ್ತಿರುವುದರ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್(Sirsi Rural Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋ ಕಳ್ಳರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಪಿಎಸ್ಐ. ಸಂತೋಷಕುಮಾರ ಅವರ ನೇತೃತ್ವದಲ್ಲಿ ಪಿಎಸ್ಐ. ಅಶೋಕ ರಾಥೋಡ್ ತನಿಖೆ ನಡೆಸುತ್ತಿದ್ದಾರೆ. ಗೋ ಕಳ್ಳರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿ : ಶಾಲೆಯಿಂದ ಮನೆಗೆ ಮರಳದೇ ರೈಲು ಹತ್ತಿದ ಬಾಲಕರು. ಗೋವಾದಲ್ಲಿ ಸುರಕ್ಷಿತವಾಗಿ ಪತ್ತೆ ಮಾಡಿದ ರೈಲ್ವೆ ಪೊಲೀಸರು.

ಕುಮಟಾ ಪೊಲೀಸ್ ಸಿಬ್ಬಂದಿಗೆ  ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿಯ ಗರಿ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಹತ್ಯೆ ಪ್ರಕರಣ. ನ್ಯಾಯಾಲಯದಿಂದ ಆರೋಪಿಗೆ ಶಿಕ್ಷೆ.

ದಾಂಡೇಲಿಯ ಹಿರಿಯ ವಕೀಲ ಅಜಿತ್ ನಾಯಕ ಹತ್ಯೆ ಕೇಸ್. ನ್ಯಾಯಾಲಯದಿಂದ ತೀರ್ಪು ಪ್ರಕಟ.