ದಾಂಡೇಲಿ(DANDELI) : ನಗರದ ಅಂಬೇವಾಡಿಯಲ್ಲಿರುವ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ (ABDUL KALAM RESIDENCY SCHOOL) ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ನಡೆಸಿದ್ದ ಹೋರಾಟದ  ವರದಿ ಮಾಡಲು ಮತ್ತು  ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ತೆರಳಿದ್ದ ಪತ್ರಕರ್ತರ ಮೇಲೆ ಪೊಲೀಸ್ ವೃತ್ತ ನಿರೀಕ್ಷಕ ಭೀಮಣ್ಣ ಎಂ ಸೂರಿ   ದಬ್ಬಾಳಿಕೆ  ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಪತ್ರಕರ್ತರ ನೈತಿಕ ಬಲವನ್ನು ಕುಗ್ಗಿಸಲು ಪ್ರಯತ್ನಿಸಿದ ಸಿಪಿಐ ವರ್ತನೆಗೆ ದಾಂಡೇಲಿ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.  ಸಂಘದ ಅಧ್ಯಕ್ಷ ಸಂದೇಶ್ ಎಸ್ ಜೈನ್, ಪತ್ರಕರ್ತರ ಸಂಘದ ಜಿಲ್ಲಾ ಪ್ರತಿನಿಧಿ ಯು ಎಸ್ ಪಾಟೀಲ್,  ಸದಸ್ಯರಾದ ಬಿ ಎನ್ ವಾಸರೆ  ಮಾತನಾಡಿ,  ಸಿಪಿಐ ಭೀಮಣ್ಣ ಅವರು ಪತ್ರಕರ್ತರ ಮೇಲೆ ದೌರ್ಜನ್ಯ ರೀತಿಯಲ್ಲಿ ದಬ್ಬಾಳಿಕೆ ಮಾಡಿರುವುದು ಖಂಡನೀಯವಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು  ತನಿಖೆ ನಡೆಸಿ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಕೃಷ್ಣ ಪಾಟೀಲ್, ಪ್ರಧಾನ ಕಾರ್ಯದರ್ಶಿ ಗುರುಶಾಂತ ಜಡೆಹಿರೇಮಠ, ಖಜಾಂಚಿ ಅಕ್ಷಯಗಿರಿ ಗೋಸಾವಿ, ಸದಸ್ಯರಾದ ರಾಜೇಶ ತಳೇಕರ, ಪ್ರವೀಣ್ ಕುಮಾರ್ ಸುಲಾಖೆ ಮತ್ತು ಅಪ್ತಾಬ್ ಶೇಖ ಉಪಸ್ಥಿತರಿದ್ದರು.

ಇದನ್ನು ಓದಿ : ಗಾಂಜಾ ಮಾರುತ್ತಿದ್ದ ವ್ಯಕ್ತಿಗೆ ಕಠಿಣ ಶಿಕ್ಷೆ

ಕಾರಿನಿಂದ ಇಳಿಯಲು ಬಿಡದ ಸಾರ್ವಜನಿಕರು.

ಕಾಳಿ ತೀರದ ಜನರಿಗೆ ಎಚ್ಚರಿಕೆ