ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮುಂಬೈ(Mumbai) : ತನ್ನ ಪತ್ನಿ ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪತಿ ಮಹಾಶಯನೊಬ್ಬ  ಸಿಟ್ಟಿನಿಂದ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ನಡೆದಿದೆ.

ಮಹಾರಾಷ್ಟ್ರದ(Maharashtra) ಪರ್ಭಾನಿ ಜಿಲ್ಲೆಯ ಗಂಗಾಖೇಡ್ ನಾಕಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಮೈನಾ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಕುಂಡ್ಲಿಕ್ ಉತ್ತಮ್ ಕಾಳೆ (32) ಎಂಬುವವನಾಗಿದ್ದಾನೆ.

ನೀನು ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದೀಯಾ ಎಂದು ಪತ್ನಿಗೆ ನಿಂದಿಸುತ್ತಿದ್ದ.  ಈ ವಿಷಯವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಮೈನಾ ಅವರ ಸಹೋದರಿ ಆರೋಪಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ರಾತ್ರಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ ಆಕೆ ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಹೋಗಿದ್ದಾಳೆ. ಜನರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾಳೆ.

ಇದನ್ನು ಓದಿ : ಬಿಸಿ ಗಂಜಿಯಲ್ಲಿ ಬಿದ್ದು ಮಗು ಸಾವು.

ಮುರ್ಡೇಶ್ವರದಲ್ಲಿ ಗೂಡಂಗಡಿ ಕಿರಿಕಿರಿ. ಅಧಿಕಾರಿಗಳು, ಪೊಲೀಸರಿಂದ ತೆರವು ಕಾರ್ಯಾಚರಣೆ.