ಇ ಸಮಾಚಾರ ಡಿಜಿಟಲ್‌ ನ್ಯೂಸ್‌ (esamachara digital news) ರಾಜ್‌ಗಢ(Rajgadha) : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದು ಆರೋಪಿಯ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್(Banglore Cyber Crime Police Inspector) ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಮಧ್ಯಪ್ರದೇಶದ ರಾಜ್‌ಗಢದ(Madhyapradesha Rajagadha) ಬಿಯೋರಾದ ಭೋಪಾಲ್ ಬೈಪಾಸ್ ಸೇತುವೆ(Bhopal Bipass Bridge) ಬಳಿ ಸಂಭವಿಸಿದೆ.

ಬೆಂಗಳೂರಿನ ಆಗ್ನೇಯ ಸೈಬರ್ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಮೃತ ದುರ್ದೈವಿ. ಅಲ್ಲದೇ ಅವರ ಜೊತೆಗಿದ್ದ ಪೊಲೀಸ್ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಕಾನ್ಪುರದಿಂದ ಇಂದೋರ್‌ಗೆ(Kanpur to Indore) ತೆರಳುತಿತ್ತು. ಬಿಯೋರಾ ಬಳಿಯ ಸೇತುವೆಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೇಲಿನ ಡೆಕ್ನ ಸೀಟ್ಗಳಲ್ಲಿ ಮಲಗಿದ್ದ ಪ್ರಯಾಣಿಕರು ಕಿಟಕಿಗಳಿಂದ ಹೊರಗೆ ಎಸೆಯಲ್ಪಟ್ಟು ಸೇತುವೆಯ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಅಲ್ಲದೇ, ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ಸೈಬರ್ ಸೆಲ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರು ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದರು. ರವಿ ಅವರ ತಂಡದ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಜೊತೆಗಿದ್ದರು.