ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮುಂಡಗೋಡು(Mundgod) : ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ(Mundgod Taluku) ಹುನಗುಂದ ಗ್ರಾಮದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ.
ಮನೆ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾದ ಸಿಲಿಂಡರ್(Auto Cylinder) ಏಕಾಏಕಿ ಸ್ಪೋಟಗೊಂಡ ಪರಿಣಾಮ ಆಟೋ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ವೀರಭದ್ರಪ್ಪ ಹಡಪದ್ ಅವರಿಗೆ ಸೇರಿದ ಆಟೋ ರಿಕ್ಷಾದಲ್ಲಿ ಸಿಲಿಂಡರ್ ಸ್ಪೋಟಗೊಂಡು(Cylinder Blast) ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಆಟೋ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿಯ ತೀವ್ರತೆ ಹೆಚ್ಚಾದ ಪರಿಣಾಮ ಪಕ್ಕದಲ್ಲಿದ್ದ ಮನೆಗೂ ಬೆಂಕಿ ತಗುಲಿ ಹಾನಿಯಾಗಿದೆ.
ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ(Fire Brigade) ಮಾಹಿತಿ ನೀಡಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಈ ಘಟನೆ ಮುಂಡಗೋಡು ಪೊಲೀಸ್ ಠಾಣಾ(Mundgod Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಿಲಿಂಡರ್ ಸ್ಪೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಇದನ್ನು ಓದಿ : ಕುಮಟಾ-ಶಿರಸಿ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಗ್ರೀನ್ ಸಿಗ್ನಲ್.
