ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ಮೊಬೈಲ್ ಬಳಕೆದಾರರೇ ಎಚ್ಚರ. ಹೊಸ ವರ್ಷ ಆಚರಣೆಯ ನೆಪ ಬಳಸಿಕೊಂಡು ಸೈಬರ್ ಕ್ರಿಮಿನಲ್ ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಅಪಾಯಕಾರಿ ಲಿಂಕ್, APK ಫೈಲ್ ಕಳುಹಿಸಿ ಸಾರ್ವಜನಿಕರ ಮೊಬೈಲ್ ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ನಿಮ್ಮ ಮೊಬೈಲ್ ಗೆ ಶುಭಾಶಯ ಬರಬಹುದು. ಸಾರ್ವಜನಿಕರು ತಮ್ಮ ಮೊಬೈಲ್‌ಗೆ ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು, APK ಫೈಲ್‌ಗಳನ್ನು ವಾಟ್ಸ್‌ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ರಿಸೀವ್ ಮಾಡಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಲು ಪೊಲೀಸರು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂತಹ ಅಪಾಯಕಾರಿಯಾದ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡಬೇಡಿ. ಹಾನಿಕಾರಕ ಲಿಂಕ್ ಮತ್ತು APK ಫೈಲ್ ವಾಟ್ಸ್ ಆ್ಯಪ್ ಗ್ರೂಪ್‌ಗಳಿಗೆ ನಿಮ್ಮ ಪರಿಚಿತ ವಾಟ್ಸ್‌ಆ್ಯಪ್‌ನಿಂದ ಪೋಸ್ಟ್ ಮಾಡಿದಲ್ಲಿ ಆಯಾ ಗ್ರೂಪ್ ಅಡ್ಮಿನ್ ಗಳು ಅಂತಹ ಲಿಂಕ್, ಫೈಲ್ ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಪೊಲೀಸರು ತಿಳಿಸಿದ್ದಾರೆ.
ಮೆಸೇಜ್ ಗೆ ರೆಸ್ಪಾನ್ಸ್ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ: 2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸಾರ್ವಜನಿಕರ ಮೊಬೈಲ್ ಗಳಿಗೆ ಸೈಬರ್ ಕ್ರಿಮಿನಲ್‌ಳು ಹಾನಿಕಾರಕ ಲಿಂಕ್, ಅಪ್ಲಿಕೇಶನ್ ಗಳನ್ನು ಕಳುಹಿಸಿ ಬಳಿಕ ಅವರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ಅವರ ವಾಟ್ಸ್ ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಹೆಚ್ಚಾಗಿದೆ.
ವಂಚನೆಗೊಳಗಾದರೆ ತಕ್ಷಣ 1930ಕ್ಕೆ ಕರೆ ಮಾಡಿ: ಸೈಬರ್ ಕ್ರೈಮ್ ವಂಚನೆಗೆ ಒಳಗಾದಲ್ಲಿ ಕೂಡಲೇ 1930ಕ್ಕೆ ಕರೆಮಾಡಿ ಅಥವಾ www.cyber- crime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸಲು ಪೊಲೀಸರು ತಿಳಿಸಿದ್ದಾರೆ. ಹೊಸ ವರ್ಷದ ಸಂಭ್ರಮದಲ್ಲಿ ಮೈಮರೆಯದಂತೆ ಸೂಚಿಸಿದ್ದಾರೆ.
ಇದನ್ನು ಓದಿ : ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗಿಲ್ಲ ನಿರ್ಬಂಧ.
ನ್ಯೂ ಹೈ ಸ್ಕೂಲ್ ಬಾಡ ತಂಡ ಕ್ರಿಕೆಟ್ ನಲ್ಲಿ ಚಾಂಪಿಯನ್