ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಕುಮಟಾ-ಶಿರಸಿ, ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ನಿಷೇಧಿಸಲಾದ ಬಸ್ ಸಂಚಾರವನ್ನು(Bus Run) ಡಿಸೆಂಬರ್ 30ರಿಂದ ಪುನಃ ಆರಂಭಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ(DC Order).
ರಾಜ್ಯದ ಅತಿ ದೊಡ್ಡ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ(Sirsi Marikamba Jaatre) ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಹಾಗೂ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ಕಾರವಾರ ರವರ ವರದಿ ಆಧಾರದ ಮೇಲೆ ಸದರಿ ರಸ್ತೆಯಲ್ಲಿ ಡಿಸೆಂಬರ್ 30 ರಿಂದ ಬಸ್ ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ(DC K Lakshmipriya) ಆದೇಶಿಸಿದ್ದಾರೆ.
ಸಂಚಾರ ಸಂದರ್ಭದಲ್ಲಿ ಬಸ್ ಹೊರತುಪಡಿಸಿ ಬೇರೆ ಭಾರಿ ವಾಹನಗಳು ಸದರಿ ರಸ್ತೆಯಲ್ಲಿ ಸಂಚರಿಸತಕ್ಕದ್ದಲ್ಲ. ಮತ್ತು ಕಾಮಗಾರಿ ಪ್ರಗತಿಯಲ್ಲಿರುವ ಪ್ರದೇಶದಲ್ಲಿ ವೇಗದ ಮೀತಿ(Speed Limit) 20ಕಿ.ಮೀ. ಗೆ ಸೀಮಿತವಾಗಿರಬೇಕು.
ಪೊಲೀಸ್ ಇಲಾಖೆ(Police Department) ವತಿಯಿಂದ ಅವಶ್ಯವಿರುವ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು, ಸಂಚಾರ (Traffic) ದಟ್ಟಣೆ ಆಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(National Highway Authority) ವತಿಯಿಂದ ರಸ್ತೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ವೇಗದ ಮಿತಿ ಫಲಕ, ರಸ್ತೆ ತಿರುವು ಪ್ರದೇಶದಲ್ಲಿ ಅಗತ್ಯ ಸೂಚನಾ ಫಲಕಗಳು, ಇನ್ನೀತರ ಅಗತ್ಯ ಸುರಕ್ಷಾ ಕ್ರಮಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಶಾಸಕ ಸತೀಶ ಸೈಲ್ ರಿಂದ ಡಿಸಿಎಂ ಗೆ ದುಬಾರಿ ಗಿಪ್ಟ್ ನೀಡಿ ಗೌರವ.
