ಸಿದ್ದಾಪುರ(Siddapur) : ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿದ್ದಾಳೆಂದು ಆರೋಪಿಸಿ ಸಾರ್ವಜನಿಕರು ಇಲ್ಲಿನ ಸರ್ಕಾರಿ ಆಸ್ಪತ್ರೆ (Government Hospital) ಎದುರು ಪ್ರತಿಭಟನೆ ನಡೆಸಿದ್ದಾರೆ.
ಜ್ಯೋತಿ ರವಿ ನಾಯ್ಕ ಎಂಬಾಕೆ ಹೆರಿಗೆಗಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ(Government Hospital) ಚಿಕಿತ್ಸೆಗಾಗಿ ದಾಖಲಾಗಿದ್ದಳು. ಸಿಜೇರಿಯನ್ ಬಳಿಕ ಡಿಲೆವರಿ ಮಾಡಲಾಗಿದೆ. ತೀವ್ರ ರಕ್ತ ಸ್ರಾವ ಉಂಟಾಗಿದ್ದರಿಂದ ನವೆಂಬರ್ ನಾಲ್ಕಕ್ಕೆ ಇಲ್ಲಿಂದ ಶಿವಮೊಗ್ಗ ಆಸ್ಪತ್ರೆಗೆ(Shivamogga Hospital) ದಾಖಲಿಸಲಾಗಿತ್ತು. ಆದರೆ ಮಹಿಳೆ ಸಾವನ್ನಪ್ಪಿದ್ದಾಳೆ. ಕೆಲ ದಿನಗಳ ಹಿಂದೆ ಕೂಡ ಬೇರೆ ಪ್ರಕರಣ ಸಂಬಂಧ ಆಸ್ಪತ್ರೆ ವೈದ್ಯರ ವಿರುದ್ಧ ಪ್ರತಿಭಟನೆ(Protest) ನಡೆಸಲಾಗಿತ್ತು.
ಇಂದು ಸಂಜೆ ಸಹ ಸಾರ್ವಜನಿಕರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ನಿರ್ಲಕ್ಷ್ಯ ಮಾಡಿದ ವೈದ್ಯರನ್ನ ಅಮಾನತ್ ಮಾಡುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿ ಎಚ್ ಓ ಹಾಗೂ ಉಸ್ತುವಾರಿ ಸಚಿವರು ಬರುವಂತೆ ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಆಗಮಿಸಿ ಪ್ರತಿಭಟನಾಕಾರರನ್ನ ಸಮಾಧಾನಪಡಿಸುವ ಪ್ರಯತ್ನ ಮಾಡಿದರೂ ಪ್ರಯೋಜನ ಆಗಲಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನು ಓದಿ : ಬೇಲೆಕೇರಿ ಪ್ರಕರಣ. ಸಿಬಿಐ ಗೆ ಹೈಕೋರ್ಟ್ ನೋಟಿಸ್