ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಗಂಗಾವತಿ(Gangavati) : ಬೆಚ್ಚಿ ಬೀಳಿಸಿದ್ದ ಬಿಜೆಪಿ(BJP) ಯುವ ಮೋರ್ಚಾ ನಗರಾಧ್ಯಕ್ಷ ವೆಂಕಟೇಶ್ ಕುರುಬರ ಬರ್ಬರ ಹತ್ಯೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದೆ. ಪ್ರಕರಣದಲ್ಲಿ ಆರು ಜನ ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ (Death sentence) ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.
2025ರ ಅಕ್ಟೋಬರ್ 7 ರಂದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವೆಂಕಟೇಶ್ ಅವರನ್ನು ಗಂಗಾವತಿ ನಗರದಲ್ಲಿ(Gangavati Town) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ತನಿಖೆ ನಡೆಸಿದ್ದ ನಗರ ಪೊಲೀಸರು 927 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು(Court) ಮಹತ್ವದ ಆದೇಶ ನೀಡಿದೆ.
ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ರವಿ, ವಿಜಯ್ ಅಲಿಯಾಸ್ ಮೈಲಾರಿ, ಧನರಾಜ್, ಭೀಮ್ ಅಲಿಯಾಸ್ ಭರತ್, ಸಲೀಮ್ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಎಂಬ ಆರು ಜನರನ್ನು ದೋಷಿಗಳೆಂದು ಪರಿಗಣಿಸಿ ಗಲ್ಲು ಶಿಕ್ಷೆ(Death Sentence) ಹಾಗೂ ತಲಾ 3 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಗಂಗಾವತಿಯ(Gangavati) ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿದ್ದ ಕಾರ್ತಿಕ್, ದಾದಪೀರ್ ಸೇರಿದಂತೆ ಇತರ ಆರು ಮಂದಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನಿರ್ದೋಷಿಗಳೆಂದು ಘೋಷಿಸಿ ನ್ಯಾಯಾಲಯವು ಖುಲಾಸೆಗೊಳಿಸಿದೆ(Acquittal).
ಇದನ್ನು ಓದಿ : ಬಾರೀ ಮಳೆ. ಆಸ್ಪತ್ರೆ ಕಾಂಪೌಂಡ್ ಕುಸಿದು ಎಂಟು ಜನರ ಸಾವು. ತನಿಖೆಗೆ ಸಿಎಂ ಆದೇಶ.
