ಬೆಂಗಳೂರು(BANGLORE) : ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ(PRIMARY SCHOOL TEACHER) ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಇನ್ನು ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(SIDDARAMAIHA) ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ  ಸಿಎಂ ಬುಧವಾರ ಕೃಷ್ಣಾದಲ್ಲಿ ಸಭೆ ನಡೆಸಿದರು.

ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ನಿಯೋಗದ ಪ್ರತಿನಿಧಿಗಳು ವಿವಿಧ ಬೇಡಿಕೆಗಳನ್ನ ಸಿಎಂ ಮುಂದಿಟ್ಟರು. 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು  ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕೆಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.

ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್ ಅಹ್ಮದ್, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿ : ಕಾರವಾರದಲ್ಲಿ ಮಹಿಳೆ ಆತ್ಮಹತ್ಯೆಯೋ..ಕೊಲೆಯೋ..?

ನವಜಾತ ಶಿಶು ಬಿಟ್ಟು ಹೋದ ಪಾಪಿಗಳು

ಹೆದ್ದಾರಿಯಲ್ಲಿ ಪ್ರತ್ಯಕ್ಷವಾದ ಚಿರತೆ

ಭಟ್ಕಳದಲ್ಲಿ ಚಿನ್ನದ ಹುಡುಗಿಗೆ ಚಿನ್ನದಂಥ ಸ್ವಾಗತ

ಸಿರ್ಸಿಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಕಾರವಾರ ಶಿಕ್ಷಕ ಪ್ರಶಸ್ತಿ ಘೋಷಣೆ