ಇ ಸಮಾಚಾರ ಡಿಜಿಟಲ್‌ ನ್ಯೂಸ್‌ (esamachara digital news) ಕಾರವಾರ(Karwar) : ಕಾರವಾರ ನಗರದ (Karwar Town)ಡಿಎಚ್‌ಓ ಕಚೇರಿಯಿಂದ ಕಾಜುಬಾಗ್ ಕ್ರಾಸ್ ವರೆಗೆ(DHO Office to Kajubhag Road) ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು ಕೂಡಲೇ ಸರಿಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್(Sooraj Kurumakar) ಮತ್ತೆ ಮತ್ತೆ ಆಗ್ರಹಿಸಿದ್ದಾರೆ.

ಕೆಲ ತಿಂಗಳ ಹಿಂದೆ ಡಿಎಚ್‌ಓ ಕಚೇರಿಯಿಂದ ಕಾಜುಬಾಗ್ ಕ್ರಾಸ್‌ವರೆಗೆ ಒಳಚರಂಡಿ ಕಾಮಗಾರಿಗಾಗಿ ರಸ್ತೆಯನ್ನು ಅಗೆಯಲಾಗಿತ್ತು. ಕಾಮಗಾರಿ ಮುಗಿದ ಬಳಿಕ ಮಣ್ಣು ಮುಚ್ಚಲಾಗಿದೆ. ಆದರೆ, ಸಮತಟ್ಟು ಮಾಡಿ ಬಳಿಕ ರಸ್ತೆಗೆ ಡಾಂಬರೀಕರಣ ಮಾಡಬೇಕಾಗಿತ್ತು. ಇದುವರೆಗೆ ಡಾಂಬರೀಕರಣ ಮಾಡದೇ ಇರುವುದರಿಂದ ಈ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಅಲ್ಲದೇ ಅರೆಬರೆ ರಸ್ತೆಯಿಂದ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಅವ್ಯವಸ್ಥೆಯಿಂದಾಗಿ ನಿತ್ಯವೂ ಇಲ್ಲಿ ಅಪಘಾತಗಳು ಇಲ್ಲಿ ಸಂಭವಿಸುತ್ತಿವೆ.

ಈ ರಸ್ತೆ ಮಾರ್ಗದಲ್ಲಿ ಅಪಘಾತದಿಂದ ಗಾಯಗೊಂಡು ಗಂಭೀರ ರೀತಿಯಲ್ಲಿ ತೊಂದರೆಗೊಳಗಾಗಿದ್ದು ಮಂಗಳೂರು, ಮಣಿಪಾಲ, ಗೋವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಹಿಂದೆಯೇ ನಗರಸಭೆ ಆಯುಕ್ತರು(CMC Commissioner) ಮತ್ತು ಜಿಲ್ಲಾಧಿಕಾರಿಗಳಿಗೆ ಮತ್ತು ಶಾಸಕರಿಗೆ ಮನವಿ ಸಲ್ಲಿಸಿದ್ದು, ಕಾಮಗಾರಿ ಮಾಡುವುದಾಗಿ ಭರವಸೆ ನೀಡುತ್ತಿದ್ದಾರೆಯೇ ಹೊರತು ಕಾಮಗಾರಿ ನಡೆಸಿಲ್ಲ ಎಂದು ಅವರು ಸೂರಜ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆ ಅವ್ಯವಸ್ಥೆಯಿಂದಾಗಿ ಪಾದಚಾರಿಗಳು ಮತ್ತು ಸಾರ್ವಜನಿಕರು ತೀವ್ರ ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯನ್ನು ಒಂದು ವಾರದೊಳಗೆ ಸರಿಪಡಿಸಲು ಕ್ರಮಕೈಗೊಳ್ಳದೇ ಇದ್ದರೆ ಸಾರ್ವಜನಿಕರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.