ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಬೆಂಗಳೂರು (Bangalore) : ಮಳೆಗಾಲದ ತುರ್ತು(Emergency) ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್(CM DK Shivakumar) ಅವರು ರಾಜ್ಯದ ಸಚಿವರಿಗೆ ವಿವಿಧ ಜಿಲ್ಲೆಗಳ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ(District Incharge) ಜವಾಬ್ದಾರಿ ಹಂಚಿದ್ದಾರೆ.

ರಾಜ್ಯದಾಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಹಾಗೂ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿದ್ದಾರೆ.  ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ(District Administration) ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಮಹತ್ವದ ಕ್ರಮ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಮುಂಗಾರು(Mansoon) ಚುರುಕಾಗಿದೆ ಕೆಲವೆಡೆ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಮುಖ್ಯಮಂತ್ರಿಗಳು ಸಚಿವರಿಗೆ ವಿವಿಧ ಜಿಲ್ಲೆಗಳ ತುರ್ತು ಪ್ರಕೃತಿ ವಿಕೋಪ ಮೇಲುಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಆದೇಶಿಸಿದ್ದಾರೆ.

ಆರೋಗ್ಯ ಸಚಿವರಾಗಿರುವ ಯು ಟಿ ಖಾದರ್(U T Khader) ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಹಾಗೂ ಕೊಡಗು ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ.

ಇದು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ ಉಸ್ತುವಾರಿ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.

ಇದನ್ನು ಓದಿ : ಪತ್ರಕರ್ತರ ಹೆಸರು ಉಲ್ಲೇಖಿಸಿ ಬೆದರಿಕೆ ಸಂದೇಶ. ಕಾರವಾರ ನ್ಯಾಯಾಲಯದಲ್ಲಿ ಹೈ ಅಲರ್ಟ್.