ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಹಲವುದಿನಗಳ ತಾಳ್ಮೆಯಿಂದ ಸಹಿಸಿಕೊಂಡು ಪಕ್ಷದ ನಾಯಕರ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದ ಡಿ ಕೆ ಶಿವಕುಮಾರ್(D K Shivakumar) ಕೊನೆಗೂ ಮುಖ್ಯಮಂತ್ರಿಯಾಗಿ(Chief Minister) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ(Siddaramaiha) ಅವರು ತಮ್ಮ ಸಿಎಂ(CM) ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಇಂದು ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Governer Thaverchand Ghelot) ಅವರು ಡಿ ಕೆ ಶಿವಕುಮಾರ್ (D K Shivakumar) ಅವರಿಗೆ ಪ್ರಮಾಣಚನ ಬೋಧಿಸಿದರು. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ ವೀರ ಗಂಗಾಧರಜ್ಜನ ಹೆಸರಲ್ಲಿ ಪ್ರಮಾಣ ವಚನ ಪಡೆದರು
ಡಿ ಕೆ ಶಿವಕುಮಾರ್ ಜೊತೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ. ಜಿ ಪರಮೇಶ್ವರ(Dr G Parameshwar) ಅವರು ಉಪಮುಖ್ಯಮಂತ್ರಿಯಾಗಿ (Deputy Chief Minister) ಪ್ರದಗ್ರಹ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಕೆ ಎಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಯು ಟಿ ಖಾದರ್, ಡಾ ಯತೀಂದ್ರ ಸಿದ್ದರಾಮಯ್ಯ, ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಜೈನ ಮುನಿಗಳು, ಮೌಲ್ವಿಗಳು, ಮಾಜಿ ಸಿಎಂ ಸಿದ್ದರಾಮಯ್ಯ(Former CM Siddaramaiha), ಎಐಸಿಸಿ(AiCC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನು ಓದಿ : ಭಟ್ಕಳದ ಮುರಿನಕಟ್ಟೆ. ಪರ್ಯಾಯ ಸೂಕ್ತ ಸ್ಥಳ ಗುರುತು : ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ.
