ಉಡುಪಿ(Udupi) : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಗೆಳೆಯನನ್ನೇ ಕತ್ತು ಕೊಯ್ದು ಕೊಲೆಗೈದ ಭೀಬತ್ಸ ಘಟನೆ ಹಳೆ ಕೆಎಸ್ ಆರ್ ಟಿಸಿ (Ksrtc) ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಡೆದಿದೆ.
ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ ಯಾಗಿದ್ದಾನೆ. ಈತನ ಗೆಳೆಯ ವಿಜಯನಗರ (Vijayanagar) ಜಿಲ್ಲೆಯ ಹೂವಿನಹಡಗಲಿಯ (Hoovinagadagalii) ಈರಣ್ಣ ಯಾನೆ ದಿನೇಶ್ ಎಂಬುವವನೆ ಕೊಲೆ ಮಾಡಿದ ಆರೋಪಿ.
ರಾತ್ರಿ ವಿಪರೀತವಾಗಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದಾರೆ. ಅವರ ಗಲಾಟೆ ವಿಕೋಪಕ್ಕೆ ಹೋಗಿ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕುತ್ತಿಗೆ ಕೊಯ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಳಿಕ ಆರೋಪಿ ತಾನೇ ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ. ಸ್ಥಳಕ್ಕೆ ಆಗಮಿಸಿದ ಉಡುಪಿ ಪೊಲೀಸರು(Udupi Police) ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ(SP Arun k)., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ತನಿಖೆಯನ್ನ ಪೊಲೀಸರು ಕೈಗೊಂಡಿದ್ದು, ಬೇರೆ ಏನಾದರೂ ಕಾರಣ ಇರಬಹುದಾ ಎಂಬುದರ ತನಿಖೆ ನಡೆಸಲಾಗಿದೆ.
ಇದನ್ನು ಓದಿ : ಗೋವು ಗಳ್ಳರಿಗೆ ಹೆಡೆ ಮುರಿ ಕಟ್ಟಿದ ಪೊಲೀಸರು