ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಅಂಕೋಲಾ ತಾಲೂಕಿನಾದ್ಯಂತ(Ankola Taluku) ನಿನ್ನೆಯಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಜುಲೈ 17ರಂದು ಶಾಲೆಗಳಿಗೆ ರಜೆ(School Holiday) ನೀಡಲಾಗಿದೆ.

ತಾಲೂಕಿನ ಎಲ್ಲಾ ಅಂಗನವಾಡಿ(Anganawadi), ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ(Primary and Highschool) ಶುಕ್ರವಾರ ರಜೆ ಘೋಷಿಸಲಾಗಿದೆ(Holiday Declared).

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಂಕೋಲಾ ತಹಸೀಲ್ದಾರ್ ತಿಳಿಸಿದ್ದಾರೆ. ಪಾಲಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ತಿಳಿಸಿದ್ದಾರೆ.