ಕಾರವಾರ(Karwar) : ಉತ್ತರಕನ್ನಡ (Uttarakannada)ಜಿಲ್ಲೆಯಲ್ಲಿ ಯಾವುದೇ ಭೂಕಂಪನದ ಸಂದೇಶ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ(Dc Lakshmipriya) ಸ್ಪಷ್ಟಪಡಿಸಿದ್ದಾರೆ.
ಶಿರಸಿ(Sirsi), ಸಿದ್ದಾಪುರ(Siddapura), ಯಲ್ಲಾಪುರ(Yallapura) ತಾಲ್ಲೂಕು ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಸುದ್ದಿಯಾಗಿತ್ತು. ಈ ಬಗ್ಗೆ ರಾಜ್ಯದ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಕೋರಲಾಗಿ ಅಂತಹ ಯಾವುದೇ ಸಂದೇಶಗಳು ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಕೋರಿಕೊಂಡಿದೆ.
ಸಾರ್ವಜನಿಕರು ಇಂತಹ ಯಾವುದೇ ಕಂಪನಗಳು ಅನುಭವಕ್ಕೆ ಬಂದಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ (1077) 08382229857) ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಇದನ್ನು ಓದಿ : ಮೂರು ಸೆಕೆಂಡ್ ಕಂಪಿಸಿದ ಭೂಮಿ